ಅಮಿತ್ ಶಾ ನೇತೃತ್ವದಲ್ಲಿನ ಸಭೆ
ದೇಶ
ಜಮ್ಮು-ಕಾಶ್ಮೀರ: ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಜಮ್ಮು-ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೂರು ದಿನಗಳ ಜಮ್ಮು-ಕಾಶ್ಮೀರ ಭೇಟಿ ಕೈಗೊಂಡಿರುವ ಅಮಿಶಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಜಮ್ಮು-ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೂರು ದಿನಗಳ ಜಮ್ಮು-ಕಾಶ್ಮೀರ ಭೇಟಿ ಕೈಗೊಂಡಿರುವ ಅಮಿಶಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೆಫ್ಟಿನೆಂಟ್ ಗೌರ್ವನರ್ ಮನೋಜ್ ಸಿನ್ಹಾ, ವಿವಿಧ ಕೇಂದ್ರ ಭದ್ರತಾ ಪಡೆಗಳ ಮುಖ್ಯಸ್ಥರು, ಪೊಲೀಸ್ ಮತ್ತು ಸೇನಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಅಮಿತ್ ಶಾ ಶ್ರೀನಗರದಿಂದ ಹಿಂದಿರುಗುವ ಮುನ್ನ ಬಾರಮುಲ್ಲಾ ಜಿಲ್ಲೆಯಲ್ಲಿನ ಶೌಕತ್ ಆಲಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸುವರು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ