ಲಂಚದ ತನಿಖೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಚಿವ ಎಸ್‌.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ

ಲಂಚ ಸ್ವೀಕರಿಸಿದ ಆರೋಪದ ಮೇಲೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ. ಪ್ರಕಾಶ್ (ಅಂದಿನ ಬಿಡಿಎ ಆಯುಕ್ತರು) ಮತ್ತು ಬೆಂಗಳೂರಿನ 37ನೇ ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಎಸ್ ಟಿ ಸೋಮಶೇಖರ್
ಎಸ್ ಟಿ ಸೋಮಶೇಖರ್

ನವದೆಹಲಿ: ಲಂಚ ಸ್ವೀಕರಿಸಿದ ಆರೋಪದ ಮೇಲೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ. ಪ್ರಕಾಶ್ (ಅಂದಿನ ಬಿಡಿಎ ಆಯುಕ್ತರು) ಮತ್ತು ಬೆಂಗಳೂರಿನ 37ನೇ ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪನಿ ಪ್ರೈವೇಟ್‌ ಲಿಮಿಟೆಡ್‌ಗೆ ಪ್ರಾಜೆಕ್ಟ್‌ ನೀಡಲು ಲಂಚ ಪಡೆದ ಆರೋಪದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ ಆದೇಶಿಸಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ಕಾರ್ಯಕರ್ತ ಟಿ.ಜೆ ಅಬ್ರಾಹಂ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಮರುಸ್ಥಾಪಿಸಿದ ಸೆಪ್ಟೆಂಬರ್ 7 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯು ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ವಿಚಾರಣೆ ನಡೆಯಲಿದೆ.

ತಮ್ಮ ಖಾಸಗಿ ದೂರನ್ನು ವಜಾಗೊಳಿಸಿದ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಬ್ರಾಹಂ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್, ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ತಿರಸ್ಕರಿಸುವುದರಿಂದ ಪ್ರಕ್ರಿಯೆಗಳ ಮುಂದುವರಿಕೆಗೆ ಅಡ್ಡಿಯಾಗುವುದಿಲ್ಲ' ಎಂದು ಹೇಳಿದ್ದರು.

ಹೈಕೋರ್ಟ್‌ನ ಆದೇಶದ ಒಂದು ವಾರದ ನಂತರ, ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 14 ರಂದು ಖಾಸಗಿ ದೂರನ್ನು ಲೋಕಾಯುಕ್ತ ಪೊಲೀಸರಿಗೆ ಉಲ್ಲೇಖಿಸಿ ಆರೋಪಗಳ ತನಿಖೆಯನ್ನು ನಡೆಸಿ ನವೆಂಬರ್ 2, 2022 ರೊಳಗೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com