ಹಿಮಾಚಲ ಪ್ರದೇಶ: ಏಮ್ಸ್ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಬಿಲಾಸ್‌ಪುರದ ಏಮ್ಸ್ ಸೇರಿದಂತೆ ರೂ. 3,650 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ಬಿಲಾಸ್ ಪುರದ ಏಮ್ಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಬಿಲಾಸ್ ಪುರದ ಏಮ್ಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಬಿಲಾಸ್ ಪುರ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಬಿಲಾಸ್‌ಪುರದ ಏಮ್ಸ್ ಸೇರಿದಂತೆ ರೂ. 3,650 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಬಿಲಾಸ್ ಪುರದ ಏಮ್ಸ್ 1,470 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು,  18 ಸ್ಪೆಷಾಲಿಟಿ ಮತ್ತು 17 ಸೂಪರ್ ಸ್ಪೆಷಾಲಿಟಿ ವಿಭಾಗಗಳು, 18 ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳು ಮತ್ತು 64 ಐಸಿಯು ಹಾಸಿಗೆಗಳು ಸೇರಿದಂತೆ 750 ಹಾಸಿಗೆಗಳನ್ನು ಹೊಂದಿರುವ ಅತ್ಯಾಧುನಿಕ ಆಸ್ಪತ್ರೆಯಾಗಿದೆ.

247 ಎಕರೆ ಪ್ರದೇಶದಲ್ಲಿ ಹರಡಿರುವ ಆಸ್ಪತ್ರೆಯು 24 ಗಂಟೆಗಳ ತುರ್ತು ಮತ್ತು ಡಯಾಲಿಸಿಸ್ ಸೌಲಭ್ಯಗಳು, ಅಲ್ಟ್ರಾಸೋನೋಗ್ರಫಿ, CT ಸ್ಕ್ಯಾನ್ ಮತ್ತು MRI ಯಂತಹ ಆಧುನಿಕ ರೋಗನಿರ್ಣಯ ಯಂತ್ರಗಳನ್ನು ಹೊಂದಿದೆ. ಇದು ಜನೌಷಧಿ ಕೇಂದ್ರ ಮತ್ತು 30 ಹಾಸಿಗೆಗಳ ಆಯುಷ್ ಬ್ಲಾಕ್ ಅನ್ನು ಸಹ ಹೊಂದಿದೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕೇಂದ್ರದ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಸ್ಥಾಪಿಸಲಾಗಿದ್ದು, ಅಕ್ಟೋಬರ್ 2017ರಲ್ಲಿ ಹೊಸದಾಗಿ ನಿರ್ಮಿಸಲಾದ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಿದ್ದರು.

ಇತರ ಅಭಿವೃದ್ಧಿ ಯೋಜನೆಗಳ ಪೈಕಿ, ಪಿಂಜೋರ್‌ನಿಂದ ನಲಗಢ್‌ವರೆಗೆ 1,690 ಕೋಟಿ ರೂಪಾಯಿಗಳ ಮೌಲ್ಯದ NH-105 ರ ನಾಲ್ಕು ಲೇನಿಂಗ್‌ಗಾಗಿ 31-ಕಿಮೀ ಉದ್ದದ ಯೋಜನೆಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಲಗಢದಲ್ಲಿ ಸುಮಾರು 350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವೈದ್ಯಕೀಯ ಸಾಧನ ಪಾರ್ಕ್‌ಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com