ದೆಹಲಿ ಅಬಕಾರಿ ನೀತಿ: 35 ಪ್ರದೇಶಗಳಲ್ಲಿ ಇಡಿ ಹೊಸ ದಾಳಿ

ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಹೊಸ ದಾಳಿಗಳನ್ನು ಪ್ರಾರಂಭಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಹೊಸ ದಾಳಿಗಳನ್ನು ಪ್ರಾರಂಭಿಸಿದೆ.

ದೆಹಲಿ, ಪಂಜಾಬ್ ಮತ್ತು ಹೈದರಾಬಾದ್‌ನ ಕೆಲವು ಸ್ಥಳಗಳಲ್ಲಿ ಸುಮಾರು 35 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕೆಲವು ಮದ್ಯ ವಿತರಕರು, ಕಂಪನಿಗಳು ಮತ್ತು ಸಂಬಂಧಿತ ಘಟಕಗಳನ್ನು ಶೋಧಿಸಲಾಗುತ್ತಿದೆ.

ಜಾರಿ ನಿರ್ದೇಶನಾಲಯ (ED) ಈ ಪ್ರಕರಣದಲ್ಲಿ ಇದುವರೆಗೆ 103ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ. ಈ ಪ್ರಕರಣದಲ್ಲಿ ಕಳೆದ ತಿಂಗಳು ಮದ್ಯ ಉದ್ಯಮಿ ಮತ್ತು ಮದ್ಯ ತಯಾರಿಕಾ ಕಂಪನಿ ಇಂಡೋಸ್ಪಿರಿಟ್‌ನ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧಿಸಿತ್ತು.

ಸಿಬಿಐ ಎಫ್ಐಆರ್ ದಾಖಲಿಸಿದ ನಂತರ ಅಕ್ರಮ ಹಣ ವರ್ಗಾವಣೆ ಕೇಸು ಹುಟ್ಟಿಕೊಂಟಿತು. ದೆಹಲಿಯ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ ನಂತರ ಮದ್ಯ ಯೋಜನೆ ಬಗ್ಗೆ ಅಧಿಕಾರಿಗಳು ತೀವ್ರ ಶೋಧ ನಡೆಸಿದರು. ಈ ಸಂಬಂಧ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com