ಎಮ್ಮೆ ಆಯ್ತು, ಇಂದು ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್‌ಪ್ರೆಸ್; ಎರಡು ದಿನದಲ್ಲಿ ಎರಡನೇ ಘಟನೆ

ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಶುಕ್ರವಾರ ಗುಜರಾತ್‌ನ ಆನಂದ್ ನಿಲ್ದಾಣದ ಬಳಿ ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗದ ಫಲಕಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಂದೇ ಭಾರತ್ ರೈಲು
ವಂದೇ ಭಾರತ್ ರೈಲು

ಮುಂಬೈ: ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಶುಕ್ರವಾರ ಗುಜರಾತ್‌ನ ಆನಂದ್ ನಿಲ್ದಾಣದ ಬಳಿ ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗದ ಫಲಕಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸದಾಗಿ ಪ್ರಾರಂಭಿಸಲಾದ ಸೆಮಿ-ಹೈ ಸ್ಪೀಡ್ ರೈಲು ನಿನ್ನೆಯಷ್ಟೇ ನಾಲ್ಕು ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು.  ರೈಲಿನ ಮುಂಭಾಗದ ಒಂದು ಭಾಗ ಮುರಿದು ಹೋಗಿತ್ತು. ಅದನ್ನು ಒಂದೇ ದಿನದಲ್ಲಿ ದುರಸ್ತಿ ಮಾಡಿದ್ದು, ರೈಲು ಮತ್ತೆ ಓಡಾಟಕ್ಕೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಈಗ ಮತ್ತೊಂದು ಅಪಘಾತ ಸಂಭವಿಸಿದೆ.

ಇಂದು ಸಂಭವಿಸಿದ ಅಪಘಾತದಲ್ಲಿ ರೈಲಿನ ಮುಂಭಾಗದ ಪ್ಯಾನೆಲ್‌ನಲ್ಲಿ ಸಣ್ಣ ಡೆಂಟ್ ಹೊರತುಪಡಿಸಿದರೆ ರೈಲಿಗೆ ಹೆಚ್ಚಿನ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 432 ಕಿಮೀ ದೂರದಲ್ಲಿರುವ ಆನಂದ್ ನಿಲ್ದಾಣದ ಬಳಿ ಇಂದು ಮಧ್ಯಾಹ್ನ 3.48ರ ಸುಮಾರಿಗೆ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರೈಲಿನ ಮುಂಭಾಗದಲ್ಲಿ ಸಣ್ಣ ಡೆಂಟ್ ಆಗಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ" ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com