ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿ ಮಾಡುವ ಉದ್ದೇಶವಿಲ್ಲ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿ ಮಾಡುವ ಮತ್ತು ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
Published: 08th October 2022 11:18 AM | Last Updated: 08th October 2022 02:17 PM | A+A A-

ರಾಹುಲ್ ಗಾಂಧಿ
ಮಂಡ್ಯ: ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿ ಮಾಡುವ ಮತ್ತು ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕ ಹಾಗೂ ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ವಿಭಾಗದ ಉಸ್ತುವಾರಿಯೂ ಆಗಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಮತ್ತು ಹಲವು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದರು.
'ಕನ್ನಡದ ಅಸ್ಮಿತೆಯ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಲಾಯಿತು. ನಂತರ ಪ್ರತಿಯೊಬ್ಬರ ಮಾತೃಭಾಷೆ ಮುಖ್ಯ. ನಾವು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇವೆ. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ' ಎಂದು ಹೇಳಿದ್ದಾಗಿ ಖರ್ಗೆ ತಿಳಿಸಿದರು.
ಇದನ್ನೂ ಓದಿ: ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ: ಹಿಂದಿ ದಿವಸ ಆಚರಣೆಗೆ ವಿರೋಧ, ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ
'ಹಾಗಾಗಿ ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿಸಿ ನಿಮ್ಮ ಭಾಷೆಯ (ಕನ್ನಡ) ಅಸ್ಮಿತೆಗೆ ಧಕ್ಕೆ ತರುವ ಉದ್ದೇಶವಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿ ಹೇಳಿದ್ದಾರೆ' ಎಂದು ಖರ್ಗೆ ತಿಳಿಸಿದರು.
ಸಂವಾದದಲ್ಲಿ ಭಾಗವಹಿಸಿದವರು ತಮಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂಬುದನ್ನು ದೃಢಪಡಿಸಿದ್ದಾರೆ. ಆದರೆ, ಅವರು 'ಸಂವಿಧಾನ ಉಳಿಸುವ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಶಾಲೆಗಳಿಂದಲೇ ಆರಂಭವಾಗಬೇಕು ಎಂದರು.
ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ರಾಜೀವ್ ಗೌಡ ಮಾತನಾಡಿ, ಸಂವಾದದಲ್ಲಿ ಭಾಗವಹಿಸಿದ ಹೆಚ್ಚಿನವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತು ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಯಿಂದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು ಎಂದರು.