ರಷ್ಯಾ - ಉಕ್ರೇನ್‌ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ

ರಷ್ಯಾ ಮತ್ತು ಉಕ್ರೇನ್‌ ನಡುವೆ ಮತ್ತೆ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು, "ರಾಜತಾಂತ್ರಿಕತೆ ಮತ್ತು ಮಾತುಕತೆ" ಹಾದಿಗೆ ತರ್ತು ವಾಪಸ್ ಆಗಬೇಕು ಎಂದು ಕರೆ ನೀಡಿದೆ.
ಅರಿಂದಮ್ ಬಾಗ್ಚಿ
ಅರಿಂದಮ್ ಬಾಗ್ಚಿ

ನವದೆಹಲಿ: ರಷ್ಯಾ ಮತ್ತು ಉಕ್ರೇನ್‌ ನಡುವೆ ಮತ್ತೆ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು, "ರಾಜತಾಂತ್ರಿಕತೆ ಮತ್ತು ಮಾತುಕತೆ" ಹಾದಿಗೆ ತರ್ತು ವಾಪಸ್ ಆಗಬೇಕು ಎಂದು ಕರೆ ನೀಡಿದೆ.

ಶನಿವಾರ ಕ್ರಿಮಿಯಾದಲ್ಲಿ ನಡೆದ ಬೃಹತ್ ಸ್ಫೋಟಕ್ಕೆ ಪ್ರತೀಕಾರವಾಗಿ ಮಾಸ್ಕೋ ಉಕ್ರೇನ್ ಮೇಲೆ ಸೋಮವಾರ ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ನಾಗರಿಕರು ಮೃತಪಟ್ಟಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ಯುದ್ಧದಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಸಂಘರ್ಷ ಶಮನಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

"ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷ ಉಲ್ಬಣಕ್ಕೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ" ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com