ಕೋವಿಡ್-19: ಕಳೆದ 24 ಗಂಟೆಗಳಲ್ಲಿ 2,786 ಹೊಸ ಪ್ರಕರಣ, ಕೇರಳದಲ್ಲಿ 6 ಸೇರಿ 12 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,21,319ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
Published: 13th October 2022 10:44 AM | Last Updated: 13th October 2022 10:44 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,21,319ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 26,509 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 6 ಮಂದಿ ಸೇರಿದಂತೆ ದೇಶದಲ್ಲಿ 12 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,28,847 ಜನರು ಸಾವಿಗೀಡಾಗಿದ್ದಾರೆ.
ಸದ್ಯ ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76ರಷ್ಟಿದೆ. ಮರಣ ಪ್ರಮಾಣ ಶೇ 1.19ರಷ್ಟಿದ್ದು, ಈವರೆಗೆ 4,40,65,963 ಜನರು ಕೊರೊನಾವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 146 ಸೇರಿ ರಾಜ್ಯದಲ್ಲಿ 208 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 219.15 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.