ಗೋವಾದಿಂದ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ, ತನಿಖೆಗೆ ಆದೇಶ

ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ನಂತರ ಬುಧವಾರ ರಾತ್ರಿ ಗೋವಾದಿಂದ ಬರುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನಯಾನ ನಿಯಂತ್ರಕ ಡಿಜಿಸಿಎ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಹೈದರಾಬಾದ್: ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ನಂತರ ಬುಧವಾರ ರಾತ್ರಿ ಗೋವಾದಿಂದ ಬರುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನಯಾನ ನಿಯಂತ್ರಕ ಡಿಜಿಸಿಎ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಮತ್ತು ಪ್ರಯಾಣಿಕರನ್ನು ತುರ್ತು ನಿರ್ಗಮನದ ಮೂಲಕ ಇಳಿಸಲಾಯಿತು.

ವಿಮಾನದಿಂದ ಇಳಿಯುವಾಗ ಓರ್ವ ಪ್ರಯಾಣಿಕನಿಗೆ ಕಾಲುಗಳ ಮೇಲೆ ಸಣ್ಣ ಗೀರುಗಳು ಉಂಟಾಗಿವೆ ಎಂದು ಡಿಜಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Q400 ವಿಮಾನ VT-SQB ನಲ್ಲಿ 86 ಪ್ರಯಾಣಿಕರಿದ್ದರು ಮತ್ತು ತುರ್ತು ಲ್ಯಾಂಡಿಂಗ್‌ನಿಂದಾಗಿ ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಂತರ ಒಂಬತ್ತು ವಿಮಾನಗಳನ್ನು ಬೇರೆ ಮಾರ್ಗದಲ್ಲಿ ಕಳುಹಿಸಲಾಯಿತು ಎಂದು ಹೈದರಾಬಾದ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಪೈಸ್‌ಜೆಟ್ ಇತ್ತೀಚಿನ ದಿನಗಳಲ್ಲಿ ಕಾರ್ಯಾಚರಣೆ ಮತ್ತು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈಗಾಗಲೇ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಕಣ್ಗಾವಲಿನಲ್ಲಿದೆ.

ಅಕ್ಟೋಬರ್ 29 ರವರೆಗೆ ತನ್ನ ಒಟ್ಟು ವಿಮಾನಗಳ ಪೈಕಿ ಶೇ 50 ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಿಯಂತ್ರಕ ವಿಮಾನಯಾನ ಸಂಸ್ಥೆಗೆ ನಿರ್ದೇಶನ ನೀಡಿತ್ತು.

'ಸ್ಪೈಸ್ ಜೆಟ್ ಕ್ಯೂ400 ವಿಮಾನವು ಗೋವಾದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ಅಕ್ಟೋಬರ್ 12 ರಂದು ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ನಂತರ ಸುರಕ್ಷಿತವಾಗಿ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ' ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

ಡಿಜಿಸಿಎ ಅಧಿಕಾರಿ ಪ್ರಕಾರ, ಕಾಕ್‌ಪಿಟ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com