ಮಾಸ್ಕೋದಿಂದ ಹೊರಟಿದ್ದ ಏರೋಫ್ಲಾಟ್ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್  ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್  ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆದರಿಕೆ ಮೇಲ್ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ವಿಮಾನವನ್ನು  ಪರಿಶೀಲಿಸಲಾಗಿದೆ, ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.

ಈ ಕುರಿತು ಎಎನ್‌ಐ ಟ್ವೀಟ್‌ ಮಾಡಿದ್ದು, 'ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇದೆ ಎಂಬ ಕರೆ ಬಂದಿತ್ತು. ಬೆಳಗಿನ ಜಾವ 3.20ಕ್ಕೆ ವಿಮಾನವು ದೆಹಲಿ ತಲುಪಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ದೆಹಲಿ ಪೊಲೀಸ್' ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com