ತಮಿಳುನಾಡು: ಹೂಸೂರು ಬಳಿ ಶಾಲೆಯಲ್ಲಿ ಅನಿಲ ಸೋರಿಕೆಯಿಂದ 100 ವಿದ್ಯಾರ್ಥಿಗಳು ಅಸ್ವಸ್ಥ

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಕಾರ್ಪೊರೇಷನ್ ಮಿಡ್ಲ್ ಸ್ಕೂಲ್ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಪರಿಣಾಮ ಸುಮಾರು 100 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ನಂತರ ಹಠಾತ್ ಅಸ್ವಸ್ಥರಾಗಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಕಾರ್ಪೊರೇಷನ್ ಮಿಡ್ಲ್ ಸ್ಕೂಲ್ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಪರಿಣಾಮ ಸುಮಾರು 100 ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ನಂತರ ಹಠಾತ್ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಅವರಲ್ಲಿ ಹಲವರಿಗೆ ವಾಕರಿಕೆ ಕಾಣಿಸಿಕೊಂಡಿತು ಮತ್ತು ಕೆಲವರು ತರಗತಿಯಲ್ಲಿ ವಾಂತಿ ಮಾಡಿಕೊಂಡರು. ಆದರೆ ಯಾರಿಗೂ ಗಂಭೀರ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಶಾಲೆ ಹಾಗೂ ಮಕ್ಕಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ವಿ.ಜಯಚಂದ್ರ ಭಾನು ರೆಡ್ಡಿ ಅವರು, ಹೊಸೂರು ಮಿಡ್ಲ್ ಸ್ಕೂಲ್ ನಲ್ಲಿ ಓದುತ್ತಿದ್ದ ಮಕ್ಕಳು ಮಧ್ಯಾಹ್ನ 3.15ರ ಸುಮಾರಿಗೆ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ತಕ್ಷಣ ಅವರನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 67 ಹುಡುಗರು ಮತ್ತು ಹುಡುಗಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳು ಅಸ್ವಸ್ಥರಾಗಲು ಕಾರಣ ಏನೂ ಎಂಬುದನ್ನು ತಿಳಿಯಲು ಅವರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ, ಹೊಸೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com