ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನಿಂದ 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವೆಂಬರ್ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಲಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಶಿಮ್ಲಾ: ನವೆಂಬರ್ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಲಿದೆ.

ಉಳಿದ 11 ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಎಐಸಿಸಿ ಹಿಮಾಚಲ ಮಾಧ್ಯಮ ಉಸ್ತುವಾರಿ ಅಲ್ಕಾ ಲಾಮಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 43 ಹಾಗೂ ಕಾಂಗ್ರೆಸ್‌ನ 22 ಸದಸ್ಯರನ್ನು ಹೊಂದಿದೆ. ಇಬ್ಬರು ಪಕ್ಷೇತರರು ಹಾಗೂ ಓರ್ವ ಸಿಪಿಎಂ ಶಾಸಕರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ಇದ್ದು, ಆಮ್ ಆದ್ಮಿ ಪಕ್ಷವೂ ತನ್ನ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಅಕ್ಟೋಬರ್ 17ರಂದು ರಾಜ್ಯ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದ್ದು, ಅಕ್ಟೋಬರ್ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 27 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 29 ಹಿಂಪಡೆಯಲು ಕೊನೇ ದಿನಾಂಕವಾಗಿರುತ್ತದೆ.

ರಾಜ್ಯದ 55,74,793 ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com