ಕೋವಿಡ್-19: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,060 ಹೊಸ ಪ್ರಕರಣ, 10ಕ್ಕೂ ಹೆಚ್ಚು ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,060 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
Published: 17th October 2022 11:19 AM | Last Updated: 17th October 2022 02:00 PM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,060 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆಯಾಗಿದೆ. ಇದೇ ವೇಳೆ 10ಕ್ಕೂ ಅಧಿಕ ಮಂದಿ ಸಾವಿಗೀಡಾಗುವ ಮೂಲಕ ಈವರೆಗೆ 5,28,905 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಲ್ಲಿ ಸದ್ಯ 26,834 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ರಷ್ಟಿವೆ.
ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.75 ರಷ್ಟಿದೆ. ಕೇರಳವೊಂದರಲ್ಲೇ 4 ಜನರು ಸಾವಿಗೀಡಾಗುವ ಮೂಲಕ 24 ಗಂಟೆಗಳ ಅವಧಿಯಲ್ಲಿ 10ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 56 ಸೇರಿ ರಾಜ್ಯದಲ್ಲಿ 108 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ದೈನಂದಿನ ಪಾಸಿಟಿವಿಟಿ ದರ ಶೇ 1.86ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಲ್ಲಿ ಈವರೆಗೆ 4,40,75,149 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.