ಕೇದಾರನಾಥ ದೇಗುಲಕ್ಕೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು

ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್‌ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ.
ಹೆಲಿಕಾಪ್ಟರ್ ಪತನಗೊಂಡಿರುವುದು.
ಹೆಲಿಕಾಪ್ಟರ್ ಪತನಗೊಂಡಿರುವುದು.

ಡೆಹ್ರಾಡೂನ್: ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್‌ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ. 

ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿ ಈ ದುರಂತ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಹೆಲಿಕಾಪ್ಟರ್​ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 8 ಮಂದಿ ಪೈಕಿ ಪೈಲಟ್ ಸೇರಿ 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆಂದು ವರದಿಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಎನ್​ಡಿಆರ್​ಎಫ್​, ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಲಿಕಾಪ್ಟರ್​ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ, ತನಿಖೆಗೆ ಆದೇಶ
ಈ ನಡುವೆ ಘಟನೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ತಲುಪಿವೆ. ಈ ದುರಂತದ ಕುರಿತು ವಿವರವಾದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com