ಗುಜರಾತ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಪ್ರತಿ ನಾಲ್ಕು ಕಿಲೋ ಮೀಟರ್ ಗೊಂದು ಶಾಲೆ: ಮನೀಶ್ ಸಿಸೋಡಿಯಾ

ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಒಂದು ವರ್ಷದೊಳಗೆ ರಾಜ್ಯದ ಎಂಟು ನಗರಗಳಲ್ಲಿ ಪ್ರತಿ ನಾಲ್ಕು ಕಿಲೋಮೀಟರ್‌ ಒಂದು ಸರ್ಕಾರಿ ಶಾಲೆ ನಿರ್ಮಿಸುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ಮನಿಶ್ ಸಿಸೋಡಿಯಾ
ಮನಿಶ್ ಸಿಸೋಡಿಯಾ

ಅಹಮದಾಬಾದ್: ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಒಂದು ವರ್ಷದೊಳಗೆ ರಾಜ್ಯದ ಎಂಟು ನಗರಗಳಲ್ಲಿ ಪ್ರತಿ ನಾಲ್ಕು ಕಿಲೋಮೀಟರ್‌ ಒಂದು ಸರ್ಕಾರಿ ಶಾಲೆ ನಿರ್ಮಿಸುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಭರವಸೆ ನೀಡಿದ್ದಾರೆ.

ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ, ಎಎಪಿ ತಂಡ ಮಾಡಿದ ಶಾಲೆಗಳ ಮ್ಯಾಪಿಂಗ್ ಪ್ರಕಾರ ಗುಜರಾತ್‌ನ 48,000 ಸರ್ಕಾರಿ ಶಾಲೆಗಳಲ್ಲಿ 32,000 ಸರ್ಕಾರಿ ಶಾಲೆಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಿಳಿಸಿದ್ದಾರೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಒಂಬತ್ತು ಗಂಟೆಗಳಿಗೂ ಹೆಚ್ಚು ಸಿಸೋಡಿಯಾ ಅವರನ್ನು ಪ್ರಶ್ನಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಡಿಸಿಎಂ, ತಾವು ಜೈಲಿಗೆ ಹೋಗಲೂ ಸಹ ಸಿದ್ಧ. ಆದರೆ ಗುಜರಾತ್ ನಲ್ಲಿ ಶಾಲೆಗಳ ನಿರ್ಮಾಣ ಕಾರ್ಯ ಮಾತ್ರ ನಿಲ್ಲುವುದಿಲ್ಲ ಎಂದು ಹೇಳಿದರು.

ಗುಜರಾತ್‌ನ ಜನರು ತಮ್ಮ ಮಕ್ಕಳಿಗಾಗಿ ಶಾಲೆಗಳನ್ನು ನಿರ್ಮಿಸಲು ನಿರ್ಧರಿಸಿದ್ದಾರೆ ಮತ್ತು ಶಾಲೆಗಳನ್ನು ನಿರ್ಮಿಸುವ ಪಕ್ಷವನ್ನು ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com