ಸಲ್ಮಾನ್ ಖಾನ್, ಶಾರುಖ್ ಮಗ ಇಬ್ಬರೂ ಡ್ರಗ್ಸ್ ಸೇವಿಸುತ್ತಾರೆ; ಬಾಬಾ ರಾಮ್‌ದೇವ್ ಹೇಳಿಕೆ
ಯೋಗ ಗುರು ಬಾಬಾ ರಾಮ್‌ದೇವ್ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಶಾರುಖ್ ಪುತ್ರ ಆರ್ಯನ್ ಖಾನ್ ವಿರುದ್ಧ ಡ್ರಗ್ಸ್ ಸೇವಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Published: 18th October 2022 11:43 AM | Last Updated: 18th October 2022 02:11 PM | A+A A-

ಬಾಬಾ ರಾಮದೇವ್
ಮೊರಾದಾಬಾದ್: ಯೋಗ ಗುರು ಬಾಬಾ ರಾಮ್‌ದೇವ್ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಶಾರುಖ್ ಪುತ್ರ ಆರ್ಯನ್ ಖಾನ್ ವಿರುದ್ಧ ಡ್ರಗ್ಸ್ ಸೇವಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಇತ್ತೀಚಿಗೆ ನಡೆದ ಆರ್ಯವೀರ್ ಮತ್ತು ವೀರಾಂಗನಾ ಸಮಾವೇಶದಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್‌ದೇವ್ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಶಾರುಖ್ ಪುತ್ರ ಆರ್ಯನ್ ಖಾನ್ ವಿರುದ್ಧ ಡ್ರಗ್ಸ್ ಸೇವಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬಾಬಾ ರಾಮ್‌ದೇವ್ ಡ್ರಗ್ಸ್ ಮುಕ್ತ ದೇಶದ ಬಗ್ಗೆ ಮಾತನಾಡುತ್ತಾ ಹಲವಾರು ಬಾಲಿವುಡ್ ತಾರೆಯರನ್ನು ತರಾಟೆ ತೆಗೆದುಕೊಂಡರು. ಸಲ್ಮಾನ್ ಖಾನ್ ಡ್ರಗ್ಸ್ ಸೇವಿಸುತ್ತಾರೆ, ಆದರೆ ಆಮೀರ್ ಖಾನ್ ಬಗ್ಗೆ ತನಗೆ ಖಚಿತ ಮಾಹಿತಿ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ: ಅನುಯಾಯಿಗಳಿದ್ದರೆ ಸ್ವಾಗತ, ಆದರೆ ಅಧಿಕೃತಕ್ಕಿಂತ ಹೆಚ್ಚು ಮಾತಾಡಿ ದಾರಿ ತಪ್ಪಿಸಬೇಡಿ: ಬಾಬಾ ರಾಮ್ ದೇವ್ ಗೆ ಹೈಕೋರ್ಟ್
ರಾಮ್‌ದೇವ್ ಆರೋಪ ಇಷ್ಟಕ್ಕೆ ಮುಗಿದಿಲ್ಲ. ‘ಸಿನಿಮಾ ರಂಗದಲ್ಲಿ ಡ್ರಗ್ಸ್ ಇದೆ. ರಾಜಕೀಯದಲ್ಲೂ ಇದೆ. ಚುನಾವಣೆ ಸಂದರ್ಭದಲ್ಲಿ ಮದ್ಯ ಪೂರೈಕೆ ಆಗುತ್ತದೆ. ನಾವು ಮಾದಕ ದ್ರವ್ಯ ಮುಕ್ತ ಭಾರತವನ್ನು ಸೃಷ್ಟಿ ಮಾಡಲು ಕ್ರಾಂತಿ ಹುಟ್ಟು ಹಾಕಬೇಕು. ಇದಕ್ಕಾಗಿ ನಾವು ಆಂದೋಲನ ಆರಂಭಿಸುತ್ತಿದ್ದೇವೆ’ ಎಂದಿದ್ದಾರೆ ರಾಮ್‌ದೇವ್.
ಬಾಬಾ ರಾಮ್‌ದೇವ್ ಮಾತಿನಲ್ಲಿ, ಸಲ್ಮಾನ್ ಖಾನ್ ಡ್ರಗ್ಸ್ ಸೇವಿಸುತ್ತಾರೆ. ಆದರೆ ಆಮೀರ್ ಖಾನ್ ಪುತ್ರನ ಬಗ್ಗೆ ನನಗೆ ಗೊತ್ತಿಲ್ಲ. ಶಾರುಖ್ ಖಾನ್ ಪುತ್ರ ಕೂಡ ಡ್ರಗ್ಸ್ ಸೇವಿಸಿ ಜೈಲು ಸೇರಿದ್ದರು. ಇನ್ನು ನಟಿಯರ ಬಗ್ಗೆ ಹೇಳುವುದಾದರೆ ಅವರ ಬಗ್ಗೆ ದೇವರಿಗೆ ಗೊತ್ತು' ಎಂದು ನೇರವಾಗಿ ಆರೋಪ ಮಾಡಿದ್ದಾರೆ.