ಗುಜರಾತ್'ನಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿ ಸಾವು, 15 ಜನರಿಗೆ ಗಾಯ

ಗುಜರಾತ್ ರಾಜ್ಯದ ವಡೋದರಾ ನಗರದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಡೋದರಾ: ಗುಜರಾತ್ ರಾಜ್ಯದ ವಡೋದರಾ ನಗರದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. 

ಅಹ್ಮದಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಘಟನೆ ನಡೆದಿದೆ. ಐಷಾರಾಮಿ ಬಸ್ ವೊಂದು ರಾಜಸ್ಥಾನದಿಂದ ಸೂರತ್ ಕಡೆಗೆ ಹೋಗುತ್ತಿದ್ದಾಗ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ಯಾಂಕರ್ ಟ್ರೇಲರ್ ವೊಂದನ್ನು ಹಿಂದಿಕ್ಕಲು ಬಸ್'ನ ಚಾಲಕ ಯತ್ನಿಸಿದ್ದು, ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ 15 ಮಂದಿಗೆ ಚಿಕಿತ್ಸೆ ಮುಂದುವರೆದಿದೆ, ಮೃತರಲ್ಲಿ ಒಂದು ಮಗು, ಮಹಿಳೆ ಮತ್ತು ನಾಲ್ವರು ಪುರುಷರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com