ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವು, ಎಲ್ ಇಟಿಯ 'ಹೈಬ್ರಿಡ್ ಉಗ್ರ'ರ ಬಂಧನ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಷೇಧಿತ ಸಂಘಟನೆ ಲಷ್ಕರ್-ಎ-ತೈಬಾ (LET) ಯ ಸ್ಥಳೀಯ "ಹೈಬ್ರಿಡ್ ಭಯೋತ್ಪಾದಕ" ನನ್ನು ಶೋಧ ಮತ್ತು ಪಹರೆ ಕಾರ್ಯಾಚರಣೆಯ ಸಮಯದಲ್ಲಿ ಬಂಧಿಸಲಾಗಿದೆ. 

ಏನಿದು ಹೈಬ್ರಿಡ್ ಉಗ್ರರು: ಹೈಬ್ರಿಡ್ ಭಯೋತ್ಪಾದಕರು ಪಟ್ಟಿ ಮಾಡದ ತೀವ್ರಗಾಮಿ ಜನರು, ಅವರು ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಾರೆ. ದಾಳಿಯ ಯಾವುದೇ ಕುರುಹುಗಳನ್ನು ಬಿಡದೆ ತಮ್ಮ ದಿನನಿತ್ಯದ ಜೀವನಕ್ಕೆ ಮರಳುತ್ತಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಇಂತಹ ಕೆಲವು ದಾಳಿಗಳು: 
1. ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ
2. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪೊಲೀಸ್ ಹುತಾತ್ಮ, CRPF ಸಿಬ್ಬಂದಿ ಗಾಯಗೊಂಡಿದ್ದಾರೆ
3. ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ 
4. ಕಾರ್ಮಿಕನ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರು ಹತ್ಯೆ
5. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಉಗ್ರಗಾಮಿಗಳ ದಾಳಿಯಲ್ಲಿ ಕಾಶ್ಮೀರಿ ಪಂಡಿತ್ ಗುಂಡಿಗೆ ಬಲಿ, ಅವರ ಸಹೋದರನ ಮೇಲೆ ಗಾಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com