ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ಇಂದಿನಿಂದ ಮೂರು ದಿನ ಭಾರತ ಭೇಟಿ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಂಗಳವಾರದಿಂದ ಮೂರು ದಿನ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಭಾರತೀಯ ಸಂವಾದಕರೊಂದಿಗೆ ಮಾತುಕತೆ ನಡೆಸುವುದರಲ್ಲದೇ, ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ 26/11 ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಲಿದ್ದಾರೆ.
ಆಂಟೋನಿಯೊ ಗುಟೆರೆಸ್
ಆಂಟೋನಿಯೊ ಗುಟೆರೆಸ್

ನವದೆಹಲಿ: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಂಗಳವಾರದಿಂದ ಮೂರು ದಿನ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಭಾರತೀಯ ಸಂವಾದಕರೊಂದಿಗೆ ಮಾತುಕತೆ ನಡೆಸುವುದರಲ್ಲದೇ, ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ 26/11 ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಲಿದ್ದಾರೆ.

ಗುಟೆರಸ್ ಅವರ ಎರಡನೇ ಅವಧಿಯ ಅಧಿಕಾರ ಜನವರಿಯಲ್ಲಿ ಪ್ರಾರಂಭವಾದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಅವರು ತಮ್ಮ ಮೊದಲ ಅವಧಿಯಲ್ಲಿ ಅಕ್ಟೋಬರ್ 2018 ರಲ್ಲಿ ದೇಶಕ್ಕೆ ಭೇಟಿ ನೀಡಿದ್ದರು.

ಗುಜರಾತ್‌ನ ಕೆವಾಡಿಯಾದಲ್ಲಿ ಅಕ್ಟೋಬರ್ 20 ರಂದು ನಡೆಯಲಿರುವ ಮಿಷನ್ ಲೈಫ್ (ಪರಿಸರಕ್ಕಾಗಿ ಜೀವನಶೈಲಿ) ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆಂಟೋನಿಯೊ ಗುಟೆರಸ್ ಪಾಲ್ಗೊಳ್ಳಲಿದ್ದಾರೆ.

ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿ ಭಾರತದಲ್ಲಿ ಎರಡು ದಿನಗಳ ಚರ್ಚೆಗಳನ್ನು ನಡೆಸಲಿದೆ. ಇದಕ್ಕೂ ಒಂದು ವಾರ ಮುಂಚಿತವಾಗಿ ಆಂಟೋನಿಯೊ ಗುಟೆರಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಅಕ್ಟೋಬರ್ 18-20 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com