ಜಯಲಲಿತಾ ವೈದ್ಯಕೀಯ ಚಿಕಿತ್ಸೆಯಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ, ತನಿಖೆಗೆ ಸಿದ್ಧ: ಶಶಿಕಲಾ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.
ಶಶಿಕಲಾ
ಶಶಿಕಲಾ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ಈ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ಶಶಿಕಲಾ, ಜಯಲಲಿತಾರ ವೈದ್ಯಕೀಯ ಚಿಕಿತ್ಸೆಯಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ ಎಂದು ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ತಿಳಿಸಿದ್ದಾರೆ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ವರದಿಯಲ್ಲಿನ ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. 

2016ರ ಡಿಸೆಂಬರ್ ನಲ್ಲಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಆಸ್ಪತ್ರೆಯಲ್ಲಿ ದೀರ್ಘಾವಧಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ರಚಿಸಿತ್ತು.

ಸಮಿತಿ ಉಲ್ಲೇಖಿಸಿರುವ ವ್ಯಕ್ತಿಗಳ ವಿರುದ್ಧ ವಿರುದ್ಧ ಸರ್ಕಾರಿ ತನಿಖೆ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com