ಆರ್ ಎಸ್ಎಸ್ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚಳ ಬಗ್ಗೆ ಉನ್ನತ ನಾಯಕರ ಚಿಂತನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಂತೆ ಮೋಹನ್ ಭಾಗವತ್ ಸೇರಿದಂತೆ  ಉನ್ನತ ಮಟ್ಟದ ನಾಯಕರ ಒತ್ತಿಹೇಳಿದ್ದಾರೆ. ಸಂಘದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರನ್ನು ಸೇರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಕೆಲವು ವರದಿಗಳು ಹೇಳುತ್ತವೆ.
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಂತೆ ಮೋಹನ್ ಭಾಗವತ್ ಸೇರಿದಂತೆ ಉನ್ನತ ಮಟ್ಟದ ನಾಯಕರ ಒತ್ತಿಹೇಳಿದ್ದಾರೆ. ಸಂಘದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರನ್ನು ಸೇರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಕೆಲವು ವರದಿಗಳು ಹೇಳುತ್ತವೆ.

ಆರ್‌ಎಸ್‌ಎಸ್ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿರುವ ನಾಲ್ಕು ದಿನಗಳ ಸಭೆಗಾಗಿ ಪ್ರಯಾಗ್‌ರಾಜ್‌ನಲ್ಲಿ ನೆರೆದಿರುವ ಆರ್‌ಎಸ್‌ಎಸ್ ಕಾರ್ಯಕರ್ತರು ಸಂಘಪರಿವಾರದ ಎಲ್ಲಾ ಅಂಗಸಂಸ್ಥೆಗಳಲ್ಲಿ ಮಹಿಳಾ ಕಾರ್ಯಕರ್ತರ ಪಾತ್ರವನ್ನು ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ಸಂಘ ಪರಿವಾರದ ನಿಯಮಿತ ಸಭೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸಂಘದ ನಾಯಕತ್ವವು ಒಪ್ಪಿಕೊಂಡಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಹೆಚ್ಚು ಪ್ರಮುಖ ಪಾತ್ರ ವಹಿಸುತ್ತಾರೆ. ಮೋಹನ್ ಭಾಗವತ್ ಅವರಲ್ಲದೆ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮತ್ತು ಇತರ ಹಲವಾರು ಉನ್ನತ ಪದಾಧಿಕಾರಿಗಳು ಗೌಹಾನಿಯಾದ ವಾತ್ಸಲ್ಯ ಇನ್‌ಸ್ಟಿಟ್ಯೂಟ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಆರ್‌ಎಸ್‌ಎಸ್ ಪದಾಧಿಕಾರಿಯೊಬ್ಬರ ಪ್ರಕಾರ, ಮಹಿಳೆಯರು ಎಲ್ಲಾ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೇಶಾದ್ಯಂತ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸಾಮಾಜಿಕ ಹಾಗೂ ಸೈದ್ಧಾಂತಿಕ ಕಾರ್ಯಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.ವಿದ್ಯಾರ್ಥಿನಿಯರನ್ನು ಸಜ್ಜುಗೊಳಿಸಲು ಮತ್ತು ವಿವಿಧ ಸಂಘ ಚಟುವಟಿಕೆಗಳನ್ನು ನಡೆಸಲು ಸಮರ್ಪಿತ ಪ್ರಯತ್ನಗಳನ್ನು ಮಾಡಲು ನಿರ್ಧರಿಸಿದ್ದಾರೆ. ಇದಲ್ಲದೆ, ದೇಶಾದ್ಯಂತ ಅಂಗನವಾಡಿಗಳು ಮತ್ತು ಸ್ವ-ಸಹಾಯ ಗುಂಪುಗಳಿಗೆ ಸಂಬಂಧಿಸಿದ ಮಹಿಳೆಯರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆಯೂ ಚರ್ಚೆ ನಡೆಯಿತು.

ಅಕ್ಟೋಬರ್ 5 ರಂದು ವಿಜಯದಶಮಿ ಭಾಷಣದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಿಳೆಯರ ಜ್ಞಾನೋದಯ, ಸಬಲೀಕರಣ ಮತ್ತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಸೇರಿದಂತೆ ಸಮಾಜದ ಎಲ್ಲಾ ಚಟುವಟಿಕೆಗಳಲ್ಲಿ ಸಮಾನ ಭಾಗವಹಿಸುವಿಕೆಯ ಮಹತ್ವವನ್ನು ಒತ್ತಿಹೇಳುವ ಅವರ ಪಾತ್ರ ಅತ್ಯಂತ ಮುಖ್ಯ ಎಂದು ಹೇಳಿದ್ದರು. 

ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಇತರ ಭಾಗಗಳಲ್ಲಿ ಕಾಶ್ಮೀರಿ ಪಂಡಿತರು ಸೇರಿದಂತೆ ಹಿಂದೂಗಳ ಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಲು ರಾಷ್ಟ್ರೀಯ ಕಾರ್ಯಕಾರಿಣಿ ಅವಕಾಶವನ್ನು ಬಳಸಿಕೊಂಡಿತು. ದೇಶದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಳ್ಳದ ವಾತಾವರಣವನ್ನು ಸೃಷ್ಟಿಸಲು ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯು ನೀತಿಯನ್ನು ರೂಪಿಸಲು ಪ್ರಸ್ತಾಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com