ಯುಪಿ ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ವೈದ್ಯ, ವಾರ್ಡ್ ಬಾಯ್ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳೆಯೊಬ್ಬರಿಗೆ ನಿದ್ರೆ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವೈದ್ಯೆ ಹಾಗೂ ವಾರ್ಡ್ ಬಾಯ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳೆಯೊಬ್ಬರಿಗೆ ನಿದ್ರೆ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವೈದ್ಯೆ ಹಾಗೂ ವಾರ್ಡ್ ಬಾಯ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವಾರ್ಡ್ ಬಾಯ್‌ನನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಏಪ್ರಿಲ್ 30 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದಾಗ ವೈದ್ಯ ಮತ್ತು ವಾರ್ಡ್ ಬಾಯ್ ಈ ಕೃತ್ಯ ಎಸಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ(ಉತ್ತರ) ಎಸ್‌ಎಂ ಖಾಸಿಮ್ ಅಬಿದಿ ಅವರು ತಿಳಿಸಿದ್ದಾರೆ.

ನಿದ್ರೆ ಔಷಧಿ ನೀಡಿದ ನಂತರ ಇಬ್ಬರೂ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮಂಗಳವಾರ ಮಹಾನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376-ಡಿ (ಗ್ಯಾಂಗ್ ರೇಪ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಸಲು ಮಹಾನಗರ ಪೊಲೀಸರ ತಂಡಕ್ಕೆ ವಹಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಮಂಗಳವಾರ ಲೋಹಿಯಾ ಪಾರ್ಕ್‌ನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಆಟೋದಲ್ಲಿ ಟ್ಯೂಷನ್ ಶಿಕ್ಷಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ರಾಜ್ಯ ರಾಜಧಾನಿಯಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com