ಮಧ್ಯ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಟ 4 ಮಂದಿ ಸಾವು, 7 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಟ 4 ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಭೋಪಾಲ್: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಟ 4 ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಬನ್‌ಮೋರ್‌ ನಗರದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವಿಗೀಡಾಗಿ 7 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ಪರಿಣಾಮ ಕಟ್ಟಡದ ಗೋಡೆ ಕುಸಿದಿದ್ದು, ಕೆಲವರು ಅವಶೇಷಗಳಡಿಯಲ್ಲಿ ಹೂತು ಹೋಗಿದ್ದಾರೆ. ದೀಪಾವಳಿಗೆ ಮುಂಚಿತವಾಗಿ ಗೋಡೌನ್ ಗೆ ಪಟಾಕಿ ದಾಸ್ತಾನು ತುಂಬಿಸಲಾಗಿತ್ತು. ಸ್ಫೋಟದಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳನ್ನು ತೆರವುಗೊಳಿಸಲು ಅಗ್ನಿಶಾಮಕ ಸಿಬ್ಬಂದಿ ಮತ್ತು ಯಂತ್ರಗಳು ಮತ್ತು ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಅಕ್ರಮ ದಾಸ್ತಾನಾಗಿದ್ದು, ದಾಸ್ತಾನಿನ ಸಂಬಂಧ ಯಾವುದೇ ರೀತಿಯ ಅನುಮತಿ ಪಡೆದಿಲ್ಲ ಎಂದು ಪೊಲೀಸ್ ಮಹಾನಿರೀಕ್ಷಕ ರಾಜೇಶ್ ಚಾವ್ಲಾ ತಿಳಿಸಿದ್ದಾರೆ.

ಸ್ಫೋಟಕ್ಕೆ ಕಾರಣ ಪಟಾಕಿಯೇ ಅಥವಾ ಬೇರೇನಾದರೂ ವಸ್ತು ಕಾರಣವೇ ಎಂದು ಹೇಳಲು ಈಗಲೇ ಸಾಧ್ಯವಿಲ್ಲ. ಸ್ಫೋಟದಲ್ಲಿ ನಾಲ್ವರು ಸಾವಿಗೀಡಾಗಿದ್ದು, 7 ಮಂದಿ ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕರಾಗಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಒಂದು ಮಗುವನ್ನು ರಕ್ಷಿಸಲಾಗಿದೆ ಎಂದು  ಜಿಲ್ಲಾ ಮೆಜಿಸ್ಟ್ರೇಟ್ ಬಿ ಕಾರ್ತಿಕೇಯನ್ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com