ಆಂಬ್ಯುಲೆನ್ಸ್ ಸಿಗದೆ ಮೃತ ಮಗುವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿ

ಆಂಬ್ಯುಲೆನ್ಸ್ ಸಿಗದ ಕಾರಣ ಬೈಕ್‌ಗೆ ಜೋಡಿಸಲಾದ ಬ್ಯಾಗ್‌ನಲ್ಲಿ ಮೃತಪಟ್ಟಿರುವ ನವಜಾತ ಶಿಶುವಿನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲಾಧಿಕಾರಿ ಕಚೇರಿಗೆ ವ್ಯಕ್ತಿಯೊಬ್ಬರು ಬಂದಿದ್ದು, ಈ ಘಟನೆಯನ್ನು ತನಿಖೆಗೆ ಆದೇಶಿಸಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಸಿಂಗ್ರೌಲಿ: ಆಂಬ್ಯುಲೆನ್ಸ್ ಸಿಗದ ಕಾರಣ ಬೈಕ್‌ಗೆ ಜೋಡಿಸಲಾದ ಬ್ಯಾಗ್‌ನಲ್ಲಿ ಮೃತಪಟ್ಟಿರುವ ನವಜಾತ ಶಿಶುವಿನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲಾಧಿಕಾರಿ ಕಚೇರಿಗೆ ವ್ಯಕ್ತಿಯೊಬ್ಬರು ಬಂದಿದ್ದು, ಈ ಘಟನೆಯನ್ನು ತನಿಖೆಗೆ ಆದೇಶಿಸಲಾಗಿದೆ.

ಉತ್ತರ ಪ್ರದೇಶದ ನೆರೆಯ ಸೋನ್‌ಭದ್ರ ಜಿಲ್ಲೆಯ ನಿವಾಸಿ ದಿನೇಶ್ ಭಾರ್ತಿ ಎಂಬಾತ ಸಿಂಗ್ರೌಲಿ ಜಿಲ್ಲಾ ಆಸ್ಪತ್ರೆಯ ವೈದ್ಯರು ತಮ್ಮ ಪತ್ನಿಯನ್ನು ಹೆರಿಗೆಗೆ ಮುನ್ನ ಕೆಲವು ಪರೀಕ್ಷೆಗಳಿಗಾಗಿ ಖಾಸಗಿ ಕ್ಲಿನಿಕ್‌ಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಉಪ ವಿಭಾಗದ ಜಿಲ್ಲಾಧಿಕಾರಿ ನೇತೃತ್ವದ ತಂಡವು ಈ ಆರೋಪಗಳ ಬಗ್ಗೆ ತನಿಖೆ ನಡೆಸಲಿದೆ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ರೌಲಿ ಜಿಲ್ಲಾಧಿಕಾರಿ ರಾಜೀವ್ ರಂಜನ್ ಮೀನಾ ಹೇಳಿದ್ದಾರೆ.

ಭಾನುವಾರ ತನ್ನ ಗರ್ಭಿಣಿ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯರು ಖಾಸಗಿ ಕ್ಲಿನಿಕ್‌ಗೆ ಭೇಟಿ ನೀಡುವಂತೆ ಹೇಳಿದ್ದರು. ಕ್ಲಿನಿಕ್‌ನಲ್ಲಿ ಕೆಲವು ಅಲ್ಟ್ರಾಸೌಂಡ್ ಪರೀಕ್ಷೆಗಳಿಗೆ 5,000 ರೂ. ಕಟ್ಟಬೇಕಾಯಿತು ಎಂದು ಭಾರ್ತಿ ದೂರಿನಲ್ಲಿ ಆರೋಪಿಸಿದ್ದಾರೆ.

ಸೋಮವಾರ ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಪತ್ನಿ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಪತ್ನಿ ಮತ್ತು ಮೃತ ಮಗುವನ್ನು ಮನೆಗೆ ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್ ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಸಹಾಯ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಅವರು ಮಂಗಳವಾರ ಬೆಳಿಗ್ಗೆ ಬೈಕ್‌ನಲ್ಲಿ ಜೋಡಿಸಲಾದ ಬ್ಯಾಗಿನಲ್ಲಿ ಮೃತಪಟ್ಟಿದ್ದ ಮಗುವಿನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿಳಿದ ನಂತರ, ಅವರಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com