ಮುಸ್ಲಿಮರು ಲಕ್ಷ್ಮಿ ಪೂಜೆ ಮಾಡುವುದಿಲ್ಲ, ಸರಸ್ವತಿಯನ್ನೂ ಪೂಜಿಸುವುದಿಲ್ಲ, ಆದರೂ...? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಶಾಸಕ!
ಹಿಂದೂ ದೇವತೆಗಳ ವಿರುದ್ಧ ವಿಚಿತ್ರವಾದ ಹೇಳಿಕೆ ನೀಡುವ ಮೂಲಕ ಬಿಹಾರ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ವಿವಾದಕ್ಕೆ ಕಾರಣರಾಗಿದ್ದಾರೆ.
Published: 20th October 2022 10:52 AM | Last Updated: 20th October 2022 10:52 AM | A+A A-

ಸಾಂದರ್ಭಿಕ ಚಿತ್ರ
ಪಾಟ್ನಾ: ಹಿಂದೂ ದೇವತೆಗಳ ವಿರುದ್ಧ ವಿಚಿತ್ರವಾದ ಹೇಳಿಕೆ ನೀಡುವ ಮೂಲಕ ಬಿಹಾರ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ವಿವಾದಕ್ಕೆ ಕಾರಣರಾಗಿದ್ದಾರೆ.
ಪಾಸ್ವಾನ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಭಾಗಲ್ಪುರದ ಶೆರ್ಮರಿ ಬಜಾರ್‌ನಲ್ಲಿ ಜನರು ಪ್ರತಿಭಟನೆ ನಡೆಸಿ ಬಿಜೆಪಿ ಶಾಸಕರ ಪ್ರತಿಕೃತಿ ದಹಿಸಿದರು.
ಭಾಗಲ್ಪುರ ಜಿಲ್ಲೆಯ ಪಿರ್ಪೈಂಟಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪಾಸ್ವಾನ್, ಹಿಂದೂ ನಂಬಿಕೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ತಮ್ಮ ನಿಲುವನ್ನು ಸಾಬೀತುಪಡಿಸಲು ಸಾಕ್ಷ್ಯಗಳೊಂದಿಗೆ ವಿವರಿಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಮಾಡುವ ಲಕ್ಷ್ಮಿ ಪೂಜೆ ಬಗ್ಗೆ ದನಿ ಎತ್ತಿದ್ದಾರೆ.
ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದಲೇ ನಮಗೆ ಸಂಪತ್ತು ಸಿಗುತ್ತಿದ್ದರೆ ಮುಸ್ಲಿಮರಲ್ಲಿ ಕೋಟ್ಯಾಧಿಪತಿಗಳು, ಕೋಟ್ಯಾಧಿಪತಿಗಳು ಇರುತ್ತಿರಲಿಲ್ಲ, ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ, ಅವರು ಶ್ರೀಮಂತರಲ್ಲವೇ? ಮುಸ್ಲಿಮರು ಸರಸ್ವತಿ ದೇವಿಯನ್ನು ಪೂಜಿಸುವುದಿಲ್ಲ, ಮುಸ್ಲಿಮರಲ್ಲಿ ವಿದ್ವಾಂಸರು ಇಲ್ಲವೇ? ಅವರು IAS ಅಥವಾ IPS ಆಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಎಲ್ಲವೂ ಜನರ ನಂಬಿಕೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆತ್ಮ ಮತ್ತು ಪರಮಾತ್ಮನ ಸಂಬಂಧ ಕೇವಲ ಜನರ ನಂಬಿಕೆಯಾಗಿದೆ ಎಂದರು. ನೀವು ನಂಬಿದರೆ ಅದು ದೇವತೆ, ಇಲ್ಲದಿದ್ದರೆ ಅದು ಕೇವಲ ಕಲ್ಲಿನ ವಿಗ್ರಹ, ನಾವು ದೇವರು ಮತ್ತು ದೇವತೆಗಳನ್ನು ನಂಬುತ್ತೇವೆಯೋ ಇಲ್ಲವೋ ಎಂಬುದು ನಮಗೆ ಬಿಟ್ಟದ್ದು, ತಾರ್ಕಿಕತೆಯನ್ನು ತಲುಪಲುನಾವು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು ಎಂದರು. ನೀವು ನಂಬುವುದನ್ನು ನಿಲ್ಲಿಸಿದರೆ, ನಿಮ್ಮ ಬೌದ್ಧಿಕ ಸಾಮರ್ಥ್ಯವು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
ಬಜರಂಗಬಲಿ ಶಕ್ತಿಯುಳ್ಳ ದೇವತೆ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಬಜರಂಗಬಲಿಯನ್ನು ಪೂಜಿಸುವುದಿಲ್ಲ. ಅವರು ಶಕ್ತಿಶಾಲಿಗಳಲ್ಲವೇ? ನೀವು ನಂಬುವುದನ್ನು ನಿಲ್ಲಿಸಿದ ದಿನ, ಇವೆಲ್ಲವೂ ಕೊನೆಗೊಳ್ಳುತ್ತದೆ" ಎಂದು ಪಾಸ್ವಾನ್ ತಿಳಿಸಿದ್ದಾರೆ.