
ಸೇನಾ ಹೆಲಿಕಾಪ್ಟರ್ ಪತನ
ಗುವಾಹಟಿ: ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟುಟಿಂಗ್ ಬಳಿಯ ಮಿಗ್ಗಿಂಗ್ ನಲ್ಲಿ ಬೆಳಗ್ಗೆ 10:43 ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ. ಪ್ರಸ್ತುತ ವಿಚಾರ ತಿಳಿಯುತ್ತಲೇ ಘಟನಾ ಪ್ರದೇಶಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಭಾರತೀಯ ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ (ALH) ಇಂದು ಬೆಳಿಗ್ಗೆ 10:40 ರ ಸುಮಾರಿಗೆ ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರದೇಶದ ಬಳಿ ಪತನಗೊಂಡಿದೆ ಎಂದು ರಕ್ಷಣಾ PRO, ಗುವಾಹಟಿ ತಿಳಿಸಿದ್ದಾರೆ.
Breaking: An Army helicopter crashes in Arunachal's Upper Siang district. Details awaited @NewIndianXpress @TheMornStandard @santwana99 pic.twitter.com/9imci7DvWo
— Prasanta Mazumdar (@prasmaz_tnie) October 21, 2022
ಹೆಲಿಕಾಪ್ಟರ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಕಾಪ್ಟರ್ ಪತನವಾದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ವೈರಲ್ ಆಗುತ್ತಿದೆ. ಕಾಪ್ಟರ್ ಪತನವಾಗುತ್ತಿದ್ದಂತೆಯೇ ಪರ್ವತದಿಂದ ಬೆಂಕಿ ಮಿಶ್ರಿತ ದಟ್ಟ ಹೊಗೆ ಏರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಜುಮ್ಮರ್ ಬಸಾರ್, ಪೊಲೀಸ್ ವರಿಷ್ಠಾಧಿಕಾರಿ ಅಪ್ಪರ್ ಸಿಯಾಂಗ್ ಅವರು ದೂರವಾಣಿ ಮೂಲಕ ಈ ಕುರಿತು ಮಾತನಾಡಿದ್ದು, "ಅಪಘಾತದ ಸ್ಥಳವನ್ನು ರಸ್ತೆಯ ಮೂಲಕ ಸಂಪರ್ಕಿಸಲಾಗಿಲ್ಲ. ರಕ್ಷಣಾ ತಂಡಗಳು ಘಟನಾ ಪ್ರದೇಶಕ್ಕೆ ಧಾವಿಸುತ್ತಿದ್ದು, ಇತರ ಎಲ್ಲಾ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೇದಾರನಾಥ ದೇಗುಲಕ್ಕೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು
ಈ ವರ್ಷದ ಆರಂಭದಲ್ಲಿ ಅಕ್ಟೋಬರ್ 5 ರಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಚೀತಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ಸೇನಾ ಪೈಲಟ್ ಗಳು ಪ್ರಾಣ ಕಳೆದುಕೊಂಡಿದ್ದರು. ತವಾಂಗ್ ಬಳಿಯ ಫಾರ್ವರ್ಡ್ ಪ್ರದೇಶಗಳಲ್ಲಿ ಹಾರುತ್ತಿದ್ದ ಚೀತಾ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ದಿನನಿತ್ಯದ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಗಾಯಗೊಂಡ ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು.