ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರ ಸಾವು, ಮುಂದುವರಿದ ಕಾರ್ಯಾಚರಣೆ
ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Published: 21st October 2022 04:19 PM | Last Updated: 21st October 2022 05:07 PM | A+A A-

ಸೇನಾ ಹೆಲಿಕಾಪ್ಟರ್ ಪತನ
ಗುವಾಹಟಿ: ಅರುಣಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟುಟಿಂಗ್ ಬಳಿಯ ಮಿಗ್ಗಿಂಗ್ ನಲ್ಲಿ ಬೆಳಗ್ಗೆ 10:43 ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಕಾಪ್ಟರ್ ನಲ್ಲಿದ್ದ ಮೂವರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದುರಂತದಲ್ಲಿ ಮತ್ತೋರ್ವ ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Breaking: An Army helicopter crashes in Arunachal's Upper Siang district. Details awaited @NewIndianXpress @TheMornStandard @santwana99 pic.twitter.com/9imci7DvWo
— Prasanta Mazumdar (@prasmaz_tnie) October 21, 2022
ಭಾರತೀಯ ಸೇನೆಯ ಸುಧಾರಿತ ಲಘು ಹೆಲಿಕಾಪ್ಟರ್ (ALH) ಇಂದು ಬೆಳಿಗ್ಗೆ 10:40 ರ ಸುಮಾರಿಗೆ ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರದೇಶದ ಬಳಿ ಪತನಗೊಂಡಿತ್ತು. ಪ್ರಾಥಮಿಕ ವರದಿಗಳ ಅನ್ವಯ ದುರಂತ ಸಂಭವಿಸದ ವೇಳೆ ಕಾಪ್ಟರ್ ನಲ್ಲಿ ಪೈಲಟ್ ಸೇರಿದಂತೆ ಮೂವರು ಇದ್ದರು ಎನ್ನಲಾಗಿದೆ. ಕಾಪ್ಟರ್ ಪತನವಾದ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ವೈರಲ್ ಆಗುತ್ತಿದೆ. ಕಾಪ್ಟರ್ ಪತನವಾಗುತ್ತಿದ್ದಂತೆಯೇ ಪರ್ವತದಿಂದ ಬೆಂಕಿ ಮಿಶ್ರಿತ ದಟ್ಟ ಹೊಗೆ ಏರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಶೋಧ ಕಾರ್ಯಾಚರಣೆ ತೀವ್ರ
ಜುಮ್ಮರ್ ಬಸಾರ್, ಪೊಲೀಸ್ ವರಿಷ್ಠಾಧಿಕಾರಿ ಅಪ್ಪರ್ ಸಿಯಾಂಗ್ ಅವರು ದೂರವಾಣಿ ಮೂಲಕ ಈ ಕುರಿತು ಮಾತನಾಡಿದ್ದು, "ಅಪಘಾತದ ಸ್ಥಳವನ್ನು ರಸ್ತೆಯ ಮೂಲಕ ಸಂಪರ್ಕಿಸಲಾಗಿಲ್ಲ. ರಕ್ಷಣಾ ತಂಡಗಳು ಘಟನಾ ಪ್ರದೇಶಕ್ಕೆ ಧಾವಿಸುತ್ತಿದ್ದು, ಇತರ ಎಲ್ಲಾ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
#UPDATE | Arunachal Pradesh chopper crash: 2 dead bodies recovered out of 3 that were seen. Efforts underway to recover the third body: Indian army https://t.co/6OACK5K7qj
— ANI (@ANI) October 21, 2022
ಈ ವರ್ಷದ ಆರಂಭದಲ್ಲಿ ಅಕ್ಟೋಬರ್ 5 ರಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಚೀತಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ಸೇನಾ ಪೈಲಟ್ ಗಳು ಪ್ರಾಣ ಕಳೆದುಕೊಂಡಿದ್ದರು. ತವಾಂಗ್ ಬಳಿಯ ಫಾರ್ವರ್ಡ್ ಪ್ರದೇಶಗಳಲ್ಲಿ ಹಾರುತ್ತಿದ್ದ ಚೀತಾ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ದಿನನಿತ್ಯದ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಗಾಯಗೊಂಡ ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು.