ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೇದಾರನಾಥನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಪ್ರಧಾನಿ ಮೋದಿ.
ಕೇದಾರನಾಥನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಪ್ರಧಾನಿ ಮೋದಿ.

ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 

ಕೇದಾರನಾಥ ಬಳಿಕ ಬದರಿನಾಥಕ್ಕೆ ಭೇಟಿ ನೀಡುವ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ.

ರಸ್ತೆ ವಿಸ್ತರಣೆ ಮತ್ತು ರೋಪ್‌ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 

ಬೆಳಿಗ್ಗೆ 9 ಗಂಟೆಗೆ ಪ್ರಧಾನಿಯವರು ಕೇದಾರನಾಥ ರೋಪ್‌ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅದರ ನಂತರ ಅವರು ಆದಿಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9:25 ರ ಸುಮಾರಿಗೆ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. .

ಬಳಿಕ ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನದಿ ತೀರದ ಅಭಿವೃದ್ಧಿಯನ್ನು ಪರಿಶೀಲಿಸಲಿದ್ದಾರೆ. ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. “ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್​ವೇಗೆ ಶಂಕುಸ್ಥಾಪನೆ ನೆರವೇರಲಿದೆ. ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳ ಸಮಯವನ್ನು 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ.

ಹೇಮಕುಂಡ್ ರೋಪ್‌ವೇ ಗೋವಿಂದಘಾಟ್‌ನಿಂದ ಹೇಮಕುಂಡ್ ಸಾಹಿಬ್‌ಗೆ ಸಂಪರ್ಕ ಕಲ್ಪಿಸುತ್ತದೆ. ಇದು ಸುಮಾರು 12.4 ಕಿಮೀ ಉದ್ದವಿರಲಿದ್ದು, ಪ್ರಯಾಣದ ಸಮಯವನ್ನು ಒಂದು ದಿನಕ್ಕಿಂತ ಹೆಚ್ಚು ಸಮಯದಿಂದ ಕೇವಲ 45 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಈ ರೋಪ್‌ವೇ ಘಂಗಾರಿಯಾವನ್ನು ಸಹ ಸಂಪರ್ಕಿಸುತ್ತದೆ. ಇದು ವ್ಯಾಲಿ ಆಫ್ ಫ್ಲವರ್ಸ್ ನ್ಯಾಷನಲ್ ಪಾರ್ಕ್‌ಗೆ ಗೇಟ್‌ವೇ ಆಗಿದೆ” ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com