ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ; ಮನೆ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಭೂಕುಸಿತದ ನಂತರ ಬಂಡೆಗಳು ಹಲವಾರು ಮನೆಗಳ ಮೇಲೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗೋಪೇಶ್ವರ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಭೂಕುಸಿತದ ನಂತರ ಬಂಡೆಗಳು ಹಲವಾರು ಮನೆಗಳ ಮೇಲೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪಿಂಡಾರ್ ಕಣಿವೆಯ ಪೈಂಗರ್ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ತರಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರವೀಂದ್ರ ಕುಮಾರ್ ಜುವಾಂತ ತಿಳಿಸಿದ್ದಾರೆ.

ಭೂಕುಸಿತದ ನಂತರ ಗ್ರಾಮದ ಮೂರು ಮನೆಗಳ ಮೇಲೆ ಬಂಡೆಗಳು ಬಿದ್ದು ನೆಲಸಮವಾಗಿವೆ. ಅವಶೇಷಗಳಡಿಯಲ್ಲಿ ಐವರು ಸಿಲುಕಿಕೊಂಡಿದ್ದರು. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಎಸ್‌ಡಿಎಂ ತಿಳಿಸಿದ್ದಾರೆ.

ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕಿತ್ಸೆ ವೇಳೆ ಗಾಯಗೊಂಡಿದ್ದ ಮೂವರು ಮೃತಪಟ್ಟಿದ್ದಾರೆ. ಮತ್ತೋರ್ವ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತರೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com