ಮಧ್ಯಪ್ರದೇಶ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್

ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ರೇವಾ: ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ಮಧ್ಯಪ್ರದೇಶದ ರೆವಾ ಜಿಲ್ಲೆಯ ಸುಹಾಸಿ ಪಹರಿ ಬಳಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಅಪಘಾತದಲ್ಲಿ ಉತ್ತರಪ್ರದೇಶದ 14 ಮಂದಿ ಮೃತಪಟ್ಟಿದ್ದಾರೆ.

ಬಸ್ ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದು, ಬಸ್‌ನಲ್ಲಿದ್ದವರೆಲ್ಲ ಉತ್ತರ ಪ್ರದೇಶದ ನಿವಾಸಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆಗೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ಯೋಗಿ ಆದಿತ್ಯನಾಥ್ ಅವರು, "ಗಾಯಗೊಂಡವರ ಚಿಕಿತ್ಸೆಗಾಗಿ ಮತ್ತು ಮೃತ ಉತ್ತರಪ್ರದೇಶದ ನಿವಾಸಿಗಳ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರ ರೂ.2 ಲಕ್ಷ ಪರಿಹಾರ ನೀಡಲಿದ್ದು, ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಸಿಎಂ ಚೌಹಾಣ್ ರಿಂದಲೂ ಪರಿಹಾರ ಘೋಷಣೆ

ಈ ನಡುವೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಮೃತರ ಕುಟುಂಬಕ್ಕೆ ರೂ.1 ಲಕ್ಷ ಹಾಗೂ ಗಾಯಾಳುಗಳಿಗೆ ರೂ.10 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. 

ಸುದ್ದಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರು ರಕ್ಷಣಾ ಮತ್ತು ಪರಿಹಾರ ಕಾರ್ಯವನ್ನು ಪ್ರಾರಂಭಿಸಿದರು. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜಯ್ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. 

ಇಲ್ಲಿಯವರೆಗಿನ ಮಾಹಿತಿ ಪ್ರಕಾರ 15 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಥಿಯೋಂಥರ್‌ನಲ್ಲಿ ಇರಿಸಲಾಗಿದೆ ಮತ್ತು ಮೃತದೇಹಗಳನ್ನು ಪ್ರಯಾಗ್‌ರಾಜ್ (ಉತ್ತರ ಪ್ರದೇಶ) ಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಘಟನೆ ಬಗ್ಗೆ ಇಂದು ಬೆಳಗ್ಗೆ ಉತ್ತರಪ್ರದೇಶ ಸಿಎಂ ಅವರೊಂದಿಗೂ ಮಾತುಕತೆ ನಡೆಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ.1 ಲಕ್ಷ ಪರಿಹಾರ ನೀಡಲಾಗುತ್ತದೆ. ಕೆಲ ಗಾಯಾಳುಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ತಲಾ ರೂ.10 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಚೌಹಾಣ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com