ಜಾರ್ಖಂಡ್: ಟೆಕ್ಕಿ ಗ್ಯಾಂಗ್ ರೇಪ್, ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಮಂದಿ ಬಂಧನ

26 ವರ್ಷದ ಸಾಪ್ಟ್ ವೇರ್ ಎಂಜಿನಿಯರ್ ಗ್ಯಾಂಗ್ ರೇಪ್ ಮಾಡಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಮಂದಿಯನ್ನು ಜಾರ್ಖಂಡ್ ರಾಜ್ಯದ ಪೂರ್ವ ಸಿಂಗ್ ಭುಮ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಂಚಿ: 26 ವರ್ಷದ ಸಾಪ್ಟ್ ವೇರ್ ಎಂಜಿನಿಯರ್ ಗ್ಯಾಂಗ್ ರೇಪ್ ಮಾಡಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಮಂದಿಯನ್ನು ಜಾರ್ಖಂಡ್ ರಾಜ್ಯದ ಪೂರ್ವ ಸಿಂಗ್ ಭುಮ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಗ್ಯಾಂಗ್ ರೇಪ್ ನಡೆದಿದ್ದ ಚೈಬಾಸಾದ ಹಳೆಯ ಏರೋಡ್ರೋಮ್ ಬಳಿಯ ನಿರ್ಜನ ಸ್ಥಳಕ್ಕೆ ಆಗಾಗ್ಗೆ ಬರುವ ಕೆಲವು ಸ್ಥಳೀಯರನ್ನು ವಿಚಾರಣೆ ನಡೆಸಿದ ನಂತರ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಪ್ರಸಿದ್ಧ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಗುರುವಾರ ಸಂಜೆ ದ್ವಿಚಕ್ರ ವಾಹನದಲ್ಲಿ ತನ್ನ ಗೆಳೆಯನೊಂದಿಗೆ ಹೊರಗೆ ಹೋಗಿದ್ದ ವೇಳೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಯುವತಿ ಹಾಗೂ ಆತನ ಗೆಳೆಯನನ್ನು ತಡೆದ ಹಲ್ಲೆ ನಡೆಸಿದ ಯುವಕರ ಗುಂಪು, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತಂಡವೊಂದು ಆರೋಪಿಗಳನ್ನು ಬಂಧಿಸಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಶುತೋಷ್ ಶೇಖರ್ ಹೇಳಿದ್ದಾರೆ. ಬಂಧಿತರಿಂದ ಯುವತಿಯ ವಾಲೆಟ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com