ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್ 

ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ತಿರುವನಂತಪುರಂ: ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 

ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಪ್ ತಾಂತ್ರಿಕ ವಿವಿಯ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ರಾಜ್ಯಪಾಲರು 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಈ ಪೈಕಿ ಎಪಿಜೆ ಅಬ್ದುಲ್ ಕಲಾಮ್ ತಾಂತ್ರಿಕ ವಿವಿಯ ಉಪಕುಲಪತಿಗಳೂ ಇದ್ದಾರೆ ಎಂದು ತಿಳಿದುಬಂದಿದೆ.

ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಸೋಮವಾರ ಬೆಳಿಗ್ಗೆ 11.30 ರ ವೇಳೆಗೆ ಉಪಕುಲಪತಿಗಳ ರಾಜೀನಾಮೆ ತಮಗೆ ತಲುಪಬೇಕು ಎಂದೂ ನಿರ್ದೇಶನ ನೀಡಿರುವುದಾಗಿ ರಾಜಭವನ ತಿಳಿಸಿದೆ.

ರಾಜ್ಯಪಾಲರ ಆದೇಶವನ್ನು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ರಾಜ್ಯಪಾಲರ ನಡೆ ಸಂಘಪರಿವಾರದ ಪಿತೂರಿಯಾಗಿದ್ದು, ದೇಶದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುವ ಅಜೆಂಡಾ ಆಗಿದೆ ಎಂದು ಟೀಕಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com