ರಾಮ್ ಲಲ್ಲಾಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ದೀಪೋತ್ಸವ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಭಾನುವಾರದಂದು ಅಯೋಧ್ಯೆಗೆ ಭೇಟಿ ನೀಡಿದ್ದು, ಭಗವಾನ್ ರಾಮ್ ಲಲ್ಲಾಗೆ ಪೂಜೆ ಸಲ್ಲಿಸಿದ್ದಾರೆ. 
ರಾಮ್ ಲಲ್ಲಾಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರಾಮ್ ಲಲ್ಲಾಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಭಾನುವಾರದಂದು ಅಯೋಧ್ಯೆಗೆ ಭೇಟಿ ನೀಡಿದ್ದು, ಭಗವಾನ್ ರಾಮ್ ಲಲ್ಲಾಗೆ ಪೂಜೆ ಸಲ್ಲಿಸಿದ್ದಾರೆ. 
 
2020ರ ಆ.05 ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಪ್ರಧಾನಿ ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಅಯೋಧ್ಯೆಗೆ ತಲುಪುತ್ತಿದ್ದಂತೆಯೇ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದು, ದೀಪೋತ್ಸವವನ್ನು  ಉದ್ಘಾಟಿಸಿದ್ದಾರೆ. ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ರಾಮ ಮಂದಿರಕ್ಕೆ ತೆರಳಿ ಅಲ್ಲಿ ದೀಪ ಆರತಿ ಬೆಳಗುವ ಮೂಲಕ ರಾಮ್ ಲಲ್ಲಾಗೆ ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಪ್ರಧಾನಿಗೆ ಕುಂಕುಮ ನೀಡಿದರು. ಈ ಬಳಿಕ ಪ್ರಧಾನಿ ರಾಮ ಮಂದಿರ ನಿರ್ಮಾಣ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ಪ್ರಧಾನಿ ಮೋದಿ ದೀಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com