ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಟ್ಟು ಕರಕಲಾದ ವ್ಯಕ್ತಿ

ಉಕ್ಕಡಂ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಕೊಯಮತ್ತೂರು: ನಗರದ ಉಕ್ಕಡಂ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಕಾರಿನಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೊಟ್ಟೈ ಈಶ್ವರನ್ ದೇವಾಲಯದ ಸುತ್ತಮುತ್ತಲಿನ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪಿ.ತಾಮರೈ ಕಣ್ಣನ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕ್ಷ್ಯ ಸಂಗ್ರಹಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಪ್ರಕರಣದ ತನಿಖೆಗೆ ಆರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಪ್ರಾಥಮಿಕ ವರದಿಗಳು ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ವಾಹನವು ಸ್ಪೀಡ್ ಬ್ರೇಕರ್ ಅನ್ನು ಅತಿವೇಗದಲ್ಲಿ ದಾಟಿದ ಕೂಡಲೇ ಸ್ಫೋಟಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.

ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ. ಕಾರನ್ನು ಪೊಲ್ಲಾಚಿಯಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರನ್ನು ಗ್ಯಾಸ್‌ನಿಂದ ಚಲಾಯಿಸಲಾಗಿದೆಯೇ ಅಥವಾ ಬೇರೆ ಯಾವುದೇ ವಸ್ತುಗಳನ್ನು ಹೊರತುಪಡಿಸಿ ಸಿಲಿಂಡರ್ ವಾಹನದಲ್ಲಿತ್ತೇ ಎಂದು ತಜ್ಞರು ಪರಿಶೀಲಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com