ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ.
Published: 23rd October 2022 12:45 PM | Last Updated: 23rd October 2022 12:50 PM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಭಾನುವಾರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕ ಎಂದು ಹೇಳಿದ್ದಾರೆ.
ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಮಾಮನಿ ಅವರು ತೀವ್ರ ಅನಾರೋಗ್ಯದಿಂದ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.
Pained by the passing away of Shri Anand Mamani, the Deputy Speaker of the Karnataka Assembly. He was a formidable leader who worked extensively for social empowerment. He also worked to strengthen BJP across Karnataka. Condolences to his family and supporters. Om Shanti.
— Narendra Modi (@narendramodi) October 23, 2022
'ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನದಿಂದ ನೋವಾಗಿದೆ. ಅವರು ಸಾಮಾಜಿಕ ಸಬಲೀಕರಣಕ್ಕಾಗಿ ವ್ಯಾಪಕವಾಗಿ ಶ್ರಮಿಸಿದ ಅಸಾಧಾರಣ ನಾಯಕರಾಗಿದ್ದರು. ಅವರು ಕರ್ನಾಟಕದಾದ್ಯಂತ ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ
ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ, ಇತ್ತೀಚೆಗಷ್ಟೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆಗೆ ಬರುತ್ತೇನೆ. ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.