ದೇಶದ ಜನತೆಗೆ ಬೆಳಕಿನ ಹಬ್ಬ 'ದೀಪಾವಳಿ' ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿಯು ಬೆಳಕು ಮತ್ತು ಕಾಂತಿಗೆ ಸಂಬಂಧಿಸಿದೆ. ಈ ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹವನ್ನು ಹೆಚ್ಚಿಸಲಿ. ನೀವು ಕುಟುಂಬ ಮತ್ತು ಸ್ನೇಹಿತರೊಂದಿಗೆ ದೀಪಾವಳಿ ಹಬ್ಬವನ್ನು ಸಂತೋಷದಿಂದ ಆಚರಿಸುವುವಿರಿ ಎಂದು ನಾನು ಭಾವಿಸುತ್ತೇನೆಂದು ಹೇಳಿದ್ದಾರೆ. 

ಸನಾತನ ಧರ್ಮದಲ್ಲಿ ದೀಪಾವಳಿ ಹಬ್ಬಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಹಬ್ಬವನ್ನು ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ದೀಪಾವಳಿಯನ್ನು ಪ್ರತಿ ವರ್ಷ ಕಾರ್ತಿಕ ಮಾಸದ ಅಮಾವಾಸ್ಯೆಯಂದು ಆಚರಿಸಲಾಗುತ್ತದೆ. ಇದಕ್ಕೂ ಮುನ್ನ ನರಕ ಚತುರ್ದಶಿ ಹಬ್ಬ ಬರುತ್ತದೆ.  ನಂತರ ಲಕ್ಷ್ಮೀ ಪೂಜೆ, ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com