ಗಂಗಾ ನದಿಯ ದಡದಲ್ಲಿರುವ ಕಾರ್ಮಿಕರು..
ಗಂಗಾ ನದಿಯ ದಡದಲ್ಲಿರುವ ಕಾರ್ಮಿಕರು..

ಸಿತ್ರಾಂಗ್ ಚಂಡಮಾರುತ: ಅಸ್ಸಾಂ, ಮೇಘಾಲಯ ಸೇರಿ 4 ಈಶಾನ್ಯ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ

ಸಿತ್ರಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ನಾಲ್ಕು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
Published on

ನವದೆಹಲಿ: ಸಿತ್ರಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ನಾಲ್ಕು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. 

ಮಂಗಳವಾರ ತ್ರಿಪುರಾದಲ್ಲಿ ಗುಡುಗು, ಮಿಂಚಿನಿಂದ ಕೂಡಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಚಂಡಮಾರುತ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಶ್ಚಿಮ ಬಂಗಾಳ ಸರ್ಕಾರವು ಅಪಾಯಕಾರಿ ಸ್ಥಳದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದು, ಪರಿಹಾರ ಸಾಮಾಗ್ರಿ ವಿತರಣೆ ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. 

ದಕ್ಷಿಣ 24 ಪರಗಣಗಳ ಬಕ್ಖಾಲಿ ಸಮುದ್ರ ತೀರದಲ್ಲಿ ನಾಗರೀಕ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಬೀಚ್‌ನಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ಬಂದ್ ಮಾಡಲಾಗಿದೆ. ಹಾಗೂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

ಚಂಡಮಾರುತ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಸಿತ್ರಾಂಗ್ ಚಂಡಮಾರುತದಿಂದಾಗಿ ಮಂಗಳವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವುದರಿಂದ "ಎಚ್ಚರವಾಗಿರಿ" ಎಂದು ಜನರಿಗೆ ಮನವಿ ಮಾಡಿದ್ದಾರೆ.

"ಅಕ್ಟೋಬರ್ 25 ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಜನರು ಅನಗತ್ಯವಾಗಿ ಅಥವಾ ಸುಂದರಬನ್ ಸೇರಿದಂತೆ ಸಮುದ್ರ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸಬೇಕು. ಸಂಕಷ್ಟಕ್ಕೆ ಸಿಲುಕುವ ಜನರಿಗೆ ನೆರವು ನೀಡಲು ರಾಜ್ಯ ಸರ್ಕಾರವು ವ್ಯವಸ್ಥೆ ಮಾಡಿದೆ ಎಂದು ತಿಳಿಸಿದ್ದರು.

ಮೇ 2009ರ ಐಲಾ,ಮೇ 2020ರ ಅಂಫಾನ್,ಮೇ 2021ರ ಯಾಸ್ ಚಂಡಮಾರುತಗಳ ಸಂದರ್ಭಗಳಲ್ಲಿಯೂ ಸುಂದರಬನ್ಸ್ ಅತ್ಯಂತ ಹೆಚ್ಚಿನ ವಿನಾಶಕ್ಕೆ ಗುರಿಯಾಗಿತ್ತು. 

ಕೋಲ್ಕತಾದಲ್ಲಿರುವ ಭಾರತೀಯ ಹವಾಮಾನ ಇಲಾಖೆಯ ಕಚೇರಿಯು ತಿಳಿಸಿರುವಂತೆ ಸಿತ್ರಾಂಗ್ ಚಂಡಮಾರುತ ಈಗ ಗಂಗಾ ನದಿಯು ಬಂಗಾಳ ಕೊಲ್ಲಿಯನ್ನು ಸೇರುವ ಸಾಗರ ದ್ವೀಪದಿಂದ 380 ಕಿ.ಮೀ.ದೂರದಲ್ಲಿದೆ.

ಚಂಡಮಾರುತವು ಮಂಗಳವಾರ ನಸುಕಿನ ವೇಳೆಗೆ ಸುಂದರಬನ್ಸ್ನ ತಿನ್ಕೋನಾ ದ್ವೀಪ ಮತ್ತು ಬಾಂಗ್ಲಾದೇಶದ ಸ್ಯಾಂಡ್ವಿಪ್ ನಡುವೆ ಅಪ್ಪಳಿಸುವ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಲ್ಲಿ ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ 24 ಪರಗಣಗಳ,ಉತ್ತರ 24 ಪರಗಣಗಳ ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಗಳಲ್ಲಿ ಗಂಟೆಗೆ 70ರಿಂದ 80 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com