ಜನವರಿ 2024 ರಲ್ಲಿ ರಾಮ ಮಂದಿರ ಭಕ್ತರ ದರ್ಶನಕ್ಕೆ ಮುಕ್ತ: ಟ್ರಸ್ಟ್ ಸದಸ್ಯ
ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ಮಂದಿರವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ದೇಗುಲ...
Published: 25th October 2022 04:20 PM | Last Updated: 25th October 2022 04:20 PM | A+A A-

ರಾಮ ಮಂದಿರದ ಮಾದರಿ
ಅಯೋಧ್ಯ: ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ಮಂದಿರವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ದೇಗುಲ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.
ಶೇ. 50 ರಷ್ಟು ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಮಂಗಳವಾರ ತಿಳಿಸಿದೆ.
ಇದನ್ನು ಓದಿ: ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿ
2024ರ ಜನವರಿಯಲ್ಲಿ ಮಕರ ಸಂಕ್ರಾಂತಿಯಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ ದೇವಾಲಯವನ್ನು ಭಕ್ತರಿಗೆ ಮುಕ್ತಗೊಳಿಸಲಾಗುವುದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.
ಮುಂದಿನ ವರ್ಷ ಡಿಸೆಂಬರ್ ವೇಳೆಗೆ ದೇಗುಲದ ನೆಲ ಮಹಡಿ ಸಿದ್ಧಗೊಳ್ಳಲಿದ್ದು, 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು ಎಂದರು.
ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ರೈ ಹೇಳಿದ್ದಾರೆ.