
ಸಾಂದರ್ಭಿಕ ಚಿತ್ರ
ಗಾಜಿಯಾಬಾದ್: ವಾಹನ ನಿಲುಗಡೆ ಮಾಡುವ ವಿಚಾರವಾಗಿ ಸಂಬಂಧಿಸಿದಂತೆ ಪ್ರಾರಂಭವಾದ ಗಲಾಟೆ ತಾರಕಕ್ಕೇರಿ ಕೊಲೆ ಹಂತಕ್ಕೆ ಹೋಗಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.
ಗಾಜಿಯಾಬಾದ್ ಉಪಾಹಾರ ಗೃಹದಲ್ಲಿ ಈ ಘಟನೆ ನಡೆದಿದ್ದು, ಉಪಾಹಾರ ಗೃಹ ಹೊರಗೆ ವಾಹನ ನಿಲುಗಡೆ ಮಾಡುವ ವಿಚಾರವಾಗಿ ನಿನ್ನೆ ರಾತ್ರಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಕಾರು ನಿಲ್ಲಿಸಲಾಗಿತ್ತು.
ಇದನ್ನೂ ಓದಿ: ರಕ್ತದ ಪ್ಲೇಟ್ಲೆಟ್ ಬದಲಿಗೆ ರೋಗಿಗೆ 'ಮೂಸಂಬಿ ಜ್ಯೂಸ್' ಪೂರಣ ಮಾಡಿದ ಉತ್ತರ ಪ್ರದೇಶದ ಆಸ್ಪತ್ರೆ ಕೆಡವಲು ನೋಟಿಸ್
ಇದು ಕಾರು ಚಾಲಕ ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ವಾಗ್ವಾದವು ಸ್ವಲ್ಪದರಲ್ಲೇ ಹೊಡೆದಾಟಕ್ಕೆ ತಿರುಗಿ ವರುಣನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಲಾಗಿದೆ. ಇಟ್ಟಿಗೆಯಿಂದ ಹೊಡೆಯುವ ವಿಡಿಯೋವನ್ನು ರಸ್ತೆ ಭಾಗದಲ್ಲಿ ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋ ವ್ಯಾಪಕ ವೈರಲ್ ಆಗಿದೆ.
ವರುಣ್ ಉಪಾಹಾರ ಗೃಹದ ಹತ್ತಿರ ವಾಸಿಸುತ್ತಿದ್ದರು ಮತ್ತು ಡೈರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ತಂದೆ ದೆಹಲಿಯ ನಿವೃತ್ತ ಪೊಲೀಸ್ ಅಧಿಕಾರಿ. ನಿನ್ನೆ ರಾತ್ರಿ ವರುಣ್ ತನ್ನ ಕಾರನ್ನು ಉಪಾಹಾರ ಗೃಹದ ಹೊರಗೆ ನಿಲ್ಲಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಕಾರು ನಿಲ್ಲಿಸಲಾಗಿತ್ತು. ಇದು ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ವಾಗ್ವಾದವು ಸ್ವಲ್ಪದರಲ್ಲೇ ಹೊಡೆದಾಟಕ್ಕೆ ತಿರುಗಿ ವರುಣ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಯಿತು.
ಇದನ್ನೂ ಓದಿ: ಯಾವುದೇ ಪ್ರಕರಣದಲ್ಲಿ ವೈಯಕ್ತಿಕ ಸ್ವಾತಂತ್ರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಇದೀಗ ವೈರಲ್ ಆಗಿರುವ ಈ ಅಪರಾಧದ ವಿಡಿಯೋದಲ್ಲಿ ವರುಣನ ತಲೆಯನ್ನು ಇಟ್ಟಿಗೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ಹಲ್ಲೆಯಿಂದ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದೀಗ ಪ್ರಕರಣ ದಾಖಲಾಸಿಕೊಂಡಿರುವ ಗಾಜಿಯಾಬಾದ್ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಐದು ತಂಡಗಳು ಶೋಧ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.