ಕಾಶ್ಮೀರ: ಜಮ್ಮು ರೈಲು ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಬ್ಯಾಗ್ ಪತ್ತೆ

ಜಮ್ಮು ಮತ್ತು ಕಾಶ್ಮೀರ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ ಎಂದು ಎಸ್‌ಎಸ್‌ಪಿ ಜಿಆರ್‌ಪಿ ಆರಿಫ್ ರಿಶು ಅವರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ ಎಂದು ಎಸ್‌ಎಸ್‌ಪಿ ಜಿಆರ್‌ಪಿ ಆರಿಫ್ ರಿಶು ಅವರು ಗುರುವಾರ ತಿಳಿಸಿದ್ದಾರೆ.

ಜಮ್ಮು ರೈಲ್ವೆ ನಿಲ್ದಾಣದ ಟ್ಯಾಕ್ಸಿ ಸ್ಟ್ಯಾಂಡ್ ಬಳಿ ಇದ್ದ ಅನುಮಾನಾಸ್ಪದ ಬ್ಯಾಗ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ. ಎರಡು ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಲಾದ ಸ್ಫೋಟಕ ವಸ್ತುಗಳು ಬ್ಯಾಗ್‌ನಲ್ಲಿ ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ. 

ಬ್ಯಾಗ್ ನಲ್ಲಿ 18 ಡಿಟೋನೇಟರ್‌ಗಳು ಮತ್ತು ಕೆಲವು ತಂತಿಗಳಿದ್ದು, ಬಾಕ್ಸ್‌ನಲ್ಲಿ ಸುಮಾರು 500 ಗ್ರಾಂ ಮೇಣದ ಮಾದರಿಯ ವಸ್ತುಗಳನ್ನು ಪ್ಯಾಕ್ ಮಾಡಲಾಗಿದೆ. ಎಲ್ಲವನ್ನೂ ವಶಪಡಿಸಿಕೊಳ್ಳಲಾಗಿದೆ" ಎಂದು ರಿಶು ತಿಳಿಸಿದ್ದಾರೆ.

ಈ ಮಧ್ಯೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಿವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

"ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ನಂತರ, ಭಯೋತ್ಪಾದಕ ಚಟುವಟಿಕೆಗಳಲ್ಲಿ ಶೇ. 34 ರಷ್ಟು ಇಳಿಕೆಯಾಗಿದೆ. ಭದ್ರತಾ ಪಡೆಗಳ ಸಾವಿನಲ್ಲೂ ಶೇ. 64 ರಷ್ಟು ಮತ್ತು ನಾಗರಿಕರ ಸಾವಿನಲ್ಲಿ ಶೇ. 90 ರಷ್ಟು ಇಳಿಕೆಯಾಗಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com