ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ಎಂಸಿಡಿಯಲ್ಲಿ ಆಪ್ ಅಧಿಕಾರಕ್ಕೆ ಬಂದರೆ 5 ವರ್ಷಗಳಲ್ಲಿ ದೆಹಲಿ ಸ್ವಚ್ಛಗೊಳಿಸುತ್ತೇವೆ: ಕೇಜ್ರಿವಾಲ್

ಮುಂಬರುವ ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ರಾಷ್ಟ್ರ ರಾಜಧಾನಿಯನ್ನು ಸ್ವಚ್ಛಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ...
Published on

ನವದೆಹಲಿ: ಮುಂಬರುವ ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ರಾಷ್ಟ್ರ ರಾಜಧಾನಿಯನ್ನು ಸ್ವಚ್ಛಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಭರವಸೆ ನೀಡಿದ್ದಾರೆ.

ಇಂದು ಗಾಜಿಪುರದ ಹೂಳು ತುಂಬುವ ಸ್ಥಳಕ್ಕೆ ಭೇಟಿ ನೀಡಿದ ದೆಹಲಿ ಸಿಎಂ, ಮುಂಬರುವ ಎಂಸಿಡಿ ಚುನಾವಣೆಯಲ್ಲಿ ಕಸದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಡಲಾಗುವುದು ಎಂದು ಹೇಳಿದರು.

ಈ ವೇಳೆ ನೂರಾರು ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿ ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಯಾಗಿ, ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಕೇಸರಿ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.

"ಈ ಕಸದ ಗುಡ್ಡೆಯ ರಕ್ಷಣೆಗೆ ಅವರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಎಲ್ಲಾ ದುಷ್ಟ ಶಕ್ತಿಗಳು ನಮ್ಮ (ಎಎಪಿ) ವಿರುದ್ಧ ಪಿತೂರಿ ನಡೆಸಿವೆ. ಅವರು ಎಂಸಿಡಿ ಚುನಾವಣೆಯನ್ನು ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡಿದರು ಮತ್ತು ಅವರಿಗೆ ಹೆಚ್ಚು ಸ್ಥಾನ ಸಿಗುತ್ತದೆ ಎಂಬ ಭರವಸೆಯಿಂದ ವಾರ್ಡ್‌ಗಳನ್ನು ವಿಂಗಡಣೆ ಮಾಡಿದರು ಎಂದು ಆರೋಪಿಸಿದ ಕೇಜ್ರಿವಾಲ್, ಬಿಜೆಪಿಗೆ ಮತ ಹಾಕಬೇಡಿ ಎಂದು ಮನವಿ ಮಾಡಿದರು.

ಬಿಜೆಪಿ ತಮ್ಮ 15 ವರ್ಷಗಳ ಮಹಾನಗರ ಪಾಲಿಕೆಗಳ ಆಡಳಿತದಲ್ಲಿ 2 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ದೆಹಲಿ ಸಿಎಂ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com