ದ್ವೇಷ ಭಾಷಣ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಂಡ ಅಜಂ ಖಾನ್
2019ರ ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
Published: 28th October 2022 08:42 PM | Last Updated: 28th October 2022 08:42 PM | A+A A-

ಆಜಂ ಖಾನ್
ಲಖನೌ: 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
ನಿನ್ನೆ ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದ ಉತ್ತರ ಪ್ರದೇಶದ ರಾಮಪುರ ಕೋರ್ಟ್, ಎಸ್ ಪಿ ನಾಯಕ ಹಾಗೂ ಇತರೆ ಇಬ್ಬರು ಆರೋಪಿಗಳಿಗೆ 25,000 ರೂ ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಇದನ್ನು ಓದಿ: ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ: ಆಜಂ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ; ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ!
ಶಿಕ್ಷೆಯ ನಂತರ, ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಶುಕ್ರವಾರ ಎಸ್ಪಿ ನಾಯಕ ಮತ್ತು ರಾಂಪುರ ಶಾಸಕ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಘೋಷಿಸಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಆಜಂ ಖಾನ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.