ಕೋವಿಡ್-19: ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ 1,574 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,574 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,50,662ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,574 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,50,662ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 18,802 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ ಕೇರಳದಲ್ಲಿ 5, ಛತ್ತೀಸಗಢ, ಗುಜರಾತ್, ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ಸೇರಿದಂತೆ ದೇಶದಲ್ಲಿ 9 ಜನರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತರ ಸಂಖ್ಯೆ 5,29,008 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.04ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.77ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.95ರಷ್ಟಿದ್ದು, ಮರಣ ಪ್ರಮಾಣ ಶೇ 1.18ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೂ 219.62 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com