
ದೆಹಲಿ-ಬೆಂಗಳೂರು ಇಂಡಿಗೋ ವಿಮಾನದ ಇಂಜಿನ್ ನಲ್ಲಿ ಬೆಂಕಿ
ದೆಹಲಿ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಇಂಡಿಗೋ ವಿಮಾನದ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೆಹಲಿ ವಿಮಾನದಲ್ಲಿ ಈ ಘಟನೆ ನಡೆದಿದೆ.
A320 ವಿಮಾನ ಟ್ಯಾಕ್ಸೀಯಿಂಗ್ ವೇಳೆ ಈ ಘಟನೆ ಸಂಭವಿಸಿದ್ದು, ಒಂದು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿತ್ತು.
Indigo 6E 2131
— Priyanka Kumar (@PriyankaaKumarr) October 28, 2022
Scary experience on Delhi runway!
This was supposed to be a take off video but this happened. #indigo pic.twitter.com/6kcKCSVLOh
ವಿಮಾನದಲ್ಲಿ 180 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು, ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ದುರಸ್ತಿಗೆ ಕಾಪಸ್ ಕಳಿಸಲಾಯಿತು. ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳುವುದು, ತುರ್ತು ಭೂಸ್ಪರ್ಶಗಳಾಗುವ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ.
6E-2131 (ದೆಹಲಿ-ಬೆಂಗಳೂರು ನಡುವೆ) ಸಂಚರಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಟೇಕ್ ಆಫ್ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪೈಲಟ್ ಟೇಕ್ ಆಫ್ ನ್ನು ನಿಲ್ಲಿಸಿ ವಿಮಾನವನ್ನು ದುರಸ್ತಿಗೆ ವಾಪಸ್ ತೆಗೆದುಕೊಂಡುಹೋಗಲಾಗಿದೆ. ಎಲ್ಲಾ ಸಿಬ್ಬಂದಿಗಳು ಹಾಗೂ ಸುರಕ್ಷಿತವಾಗಿದ್ದು, ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ವಿಮಾನ ಸಂಸ್ಥೆ ಹೇಳಿದೆ.