ಮಹಾರಾಷ್ಟ್ರ: ಪುಣೆಯಲ್ಲಿ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯ ಬಂಧನ

ಮಹಾರಾಷ್ಟ್ರದ ಪುಣೆ ನಗರದಲ್ಲಿ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 38 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 38 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ನಗರದ ಡೆಕ್ಕನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಆತನಿಗೆ ಪ್ರಜ್ಞೆ ತಪ್ಪುವವರೆಗೂ ಥಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೇಪಾಳ ಮೂಲದ ಆರೋಪಿಯನ್ನು ಗಾಯಗೊಂಡ ಸ್ಥಿತಿಯಲ್ಲಿ ಸಾಸೂನ್ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

'ಸ್ಥಳೀಯರು ಸಲ್ಲಿಸಿದ ಸಾಕ್ಷ್ಯದ ಆಧಾರದ ಮೇಲೆ, ನಾವು ಆತನ ವಿರುದ್ಧ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು ಭಾರತೀಯ ದಂಡ ಸಂಹಿತೆ ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ' ಎಂದು ಡೆಕ್ಕನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com