ಮಹಿಳೆಯರ ಸಂತಾನೋತ್ಪತ್ತಿ ಮೇಲಿನ ವಯಸ್ಸಿನ ನಿರ್ಬಂಧದ ವಿರುದ್ಧ ಮನವಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ಣ ವರ್ಗೀಕರಣ ತಂತ್ರಗಳು (ಲಿಂಗ ಆಯ್ಕೆ ನಿಷೇಧ) ಪರೀಕ್ಷೆಗಳನ್ನು ನಡೆಸಲು ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ 35 ವರ್ಷಗಳ ವಯಸ್ಸಿನ ನಿರ್ಬಂಧದ ವಿರುದ್ಧದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on

ನವದೆಹಲಿ: ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ಣ ವರ್ಗೀಕರಣ ತಂತ್ರಗಳು (ಲಿಂಗ ಆಯ್ಕೆ ನಿಷೇಧ) ಪರೀಕ್ಷೆಗಳನ್ನು ನಡೆಸಲು ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ 35 ವರ್ಷಗಳ ವಯಸ್ಸಿನ ನಿರ್ಬಂಧದ ವಿರುದ್ಧದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.

ವಯೋಮಿತಿ ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ ನಿರ್ಬಂಧವಾಗಿದೆ ಎಂದು ವಕೀಲರೊಬ್ಬರು ಸಲ್ಲಿಸಿದ ಮನವಿ ಮೇರೆಗೆ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

'35 ವರ್ಷಗಳ ವಯಸ್ಸಿನ ನಿರ್ಬಂಧವು ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ ನಿರ್ಬಂಧವಾಗಿದೆ ಎಂದು 1994ರ ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ಣ ವರ್ಗೀಕರಣ ತಂತ್ರಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆಯ ಸೆಕ್ಷನ್ 4(3)(i) ಅನ್ನು ಮತ್ತು ಈ ನ್ಯಾಯಾಲಯದ ಇತ್ತೀಚಿನ ತೀರ್ಪನ್ನು ಉಲ್ಲೇಖಿಸಿದ್ದಾರೆ. ನೋಟಿಸ್ ಅನ್ನು ಮೇಲಿನ ಅಂಶಕ್ಕೆ ಸೀಮಿತಗೊಳಿಸಲಾಗಿದೆ' ಎಂದು ಅದು ಹೇಳಿದೆ.

ಮೀರಾ ಕೌರಾ ಪಟೇಲ್ ಅವರು 1994 ರ ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ಣ ವರ್ಗೀಕರಣ ತಂತ್ರಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆಯ ಸೆಕ್ಷನ್ 4 (3) (i) ನಲ್ಲಿ 35 ವರ್ಷಗಳ ವಯಸ್ಸಿನ ನಿರ್ಬಂಧವು ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ ನಿರ್ಬಂಧವಾಗಿದೆ ಎಂದು ಪ್ರತಿಪಾಧಿಸಿ ವಕೀಲೆ ಮೀರಾ ಕೌರಾ ಪಟೇಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಕಾಯ್ದೆಯ ಪ್ರಕಾರ, ಗರ್ಭಿಣಿಯ ವಯಸ್ಸು 35 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಯಾವುದೇ ಪ್ರಸವಪೂರ್ವ ರೋಗನಿರ್ಣಯ ತಂತ್ರಗಳನ್ನು ಬಳಸಲಾಗುವುದಿಲ್ಲ ಅಥವಾ ನಡೆಸಬಾರದು ಎಂದಿದೆ.

ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಕುರಿತ ಮಹತ್ವದ ತೀರ್ಪಿನಲ್ಲಿ, ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಕಾಯ್ದೆ (ಎಂಟಿಪಿ) ಅಡಿಯಲ್ಲಿ ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ 24 ವಾರಗಳವರೆಗೆ ಅರ್ಹರಾಗಿರುತ್ತಾರೆ ಮತ್ತು ಅವಪ ವೈವಾಹಿಕ ಸ್ಥಿತಿಗತಿಯ ಆಧಾರದ ಮೇಲೆ ಯಾವುದೇ ವ್ಯತ್ಯಾಸವನ್ನು ಮಾಡುವುದು 'ಸಾಂವಿಧಾನಿಕವಾಗಿ ಸಮರ್ಥನೀಯವಲ್ಲ' ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com