ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನ: ಮೂವರು ನ್ಯಾಯಾಂಗ ಬಂಧನಕ್ಕೆ 

ನಾಲ್ವರು ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿರುವ ಮೂವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದ್ರಾಬಾದ್: ನಾಲ್ವರು ಟಿಆರ್ ಎಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿರುವ ಮೂವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಕೆಳ ನ್ಯಾಯಾಲಯದ ಆದೇಶವನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿ, ಆರೋಪಿಗಳು  ಪೊಲೀಸರ ಮುಂದೆ ಶರಣಾಗುವಂತೆ ನಿರ್ದೇಶಿಸಿದ ನಂತರ ಶನಿವಾರ ರಾತ್ರಿ ಅವರನ್ನು ಬಂಧಿಸಲಾಗಿತ್ತು. 

ಇದಕ್ಕೂ ಮುನ್ನಾ ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯ ಬಂಧನಕ್ಕೂ ಮುನ್ನ ನೋಟಿಸ್ ನೀಡಿಲ್ಲ ಎಂಬ ಕಾರಣ ನೀಡಿ,  ಟಿಆರ್ ಎಸ್ ಶಾಸಕರ ಖರೀದಿ ಯತ್ನದ ಆರೋಪದ ಮೇರೆಗೆ ಸೈಬರಾಬಾದ್ ಪೊಲೀಸರು ಬಂಧಿಸಿದ್ದ ಮೂವರ ಬಂಧನವನ್ನು ತಿರಸ್ಕರಿಸಿತ್ತು.

ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.  ಬಿಜೆಪಿ ತನ್ನ ಕೆಲವು ಶಾಸಕರನ್ನು ಖರೀದಿಸಲು  ಪ್ರಯತ್ನಿಸಿದೆ ಎಂಬ ಟಿಆರ್‌ಎಸ್ ಆರೋಪದ ನಂತರ, ಕೇಸರಿ ಪಕ್ಷ ಕೇಂದ್ರೀಯ ತನಿಖಾ ದಳ ತನಿಖೆಗೆ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಬಿಜೆಪಿಯ ಅರ್ಜಿಯ ಮೇರೆಗೆ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಾಧೀಶರು, ಪ್ರಕರಣವನ್ನು ನವೆಂಬರ್ 4 ಕ್ಕೆ ಮುಂದೂಡಿದರು ಮತ್ತು ಅಲ್ಲಿಯವರೆಗೆ ತನಿಖೆಯನ್ನು ಮುಂದೂಡಿದರು.ಶಾಸಕರಲ್ಲೊಬ್ಬರಾದ ಪೈಲಟ್ ರೋಹಿತ್ ರೆಡ್ಡಿ ಅವರ ದೂರಿನ ಆಧಾರದ ಮೇಲೆ ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ಮೂವರ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಪಿತೂರಿ, ಲಂಚ ನೀಡುವಿಕೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್ ಐಆರ್ ಪ್ರಕಾರ ಟಿಆರ್ ಎಸ್ ತೊರೆದು ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದಾದರೆ ನನ್ನಗೆ 100 ಕೋಟಿ ರೂ. ಕೊಡುವುದಾಗಿ ಆಮಿಷವೊಡ್ಡಲಾಗಿದೆ ಎಂದು ರೋಹಿತ್ ರೆಡ್ಡಿ ಆರೋಪಿಸಿದ್ದಾರೆ.  ಈ ಘಟನೆ ಬಿಜೆಪಿ ಮತ್ತು ಟಿಆರ್‌ಎಸ್ ನಡುವೆ ಆರೋಪ, ಪ್ರತ್ಯಾರೋಪಗಳೊಂದಿಗೆ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com