ಮಿಜೋರಾಂ: ಅಪಘಾತದ ನಂತರ ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ ತಗುಲಿ 4 ಸಾವು, 18 ಮಂದಿಗೆ ಗಾಯ

ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಅಪಘಾತದ ನಂತರ ಬೆಂಕಿ ಹೊತ್ತಿಕೊಂಡ ತೈಲ ಟ್ಯಾಂಕರ್
ಅಪಘಾತದ ನಂತರ ಬೆಂಕಿ ಹೊತ್ತಿಕೊಂಡ ತೈಲ ಟ್ಯಾಂಕರ್

ಐಜ್ವಾಲ್: ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಐಜ್ವಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಲಾಲ್ರುಯಾಯಾ ಮಾತನಾಡಿ, 20,000 ಲೀಟರ್‌ಗೂ ಹೆಚ್ಚು ಪೆಟ್ರೋಲ್ ತುಂಬಿಕೊಂಡು ಚಂಫೈಗೆ ತೆರಳುತ್ತಿದ್ದ ತೈಲ ಟ್ಯಾಂಕರ್ ತುಯಿರಿಯಾಲ್ ಏರ್‌ಫೀಲ್ಡ್ ಬಳಿ ಶನಿವಾರ ರಾತ್ರಿ ಅಪಘಾತಕ್ಕೀಡಾಗಿದೆ. ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ತೈಲ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದ್ದ ಪೆಟ್ರೋಲ್ ಅನ್ನು ಸಂಗ್ರಹಿಸಲು ಸಂತ್ರಸ್ತರು ಸೇರಿದಂತೆ ಸ್ಥಳೀಯರು ಪ್ರಯತ್ನಿಸುತ್ತಿದ್ದರು.

'ಬಳಿಕ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು ನಾಲ್ಕು ಜನರು ಸಾವಿಗೀಡಾಗಿದ್ದಾರೆ ಮತ್ತು13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸಂಖ್ಯೆ ಕನಿಷ್ಠ 18ಕ್ಕೆ ಏರಿಕೆಯಾಗಿರಬಹುದು ಏಕೆಂದರೆ, ಅವರನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಮತ್ತು ನಾವು ವಿವರಗಳನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ' ಎಂದು ಲಾಲ್ರುಯಾಯಾ ದೂರವಾಣಿ ಕರೆ ಮೂಲಕ ಐಎಎನ್ಎಸ್‌ಗೆ ತಿಳಿಸಿದರು.

ಐಜ್ವಾಲ್‌ನ ಸಿನೊಡ್ ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಟ್ಯಾಕ್ಸಿ ಮತ್ತು ಎರಡು ಬೈಕ್‌ಗಳು ಜಖಂಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com