ಕಾಶ್ಮೀರ: ಕೆರಾನ್‌ನಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಪಾಕ್ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಸೋಮವಾರ ಓರ್ವ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡುವ ಮೂಲಕ ಗಡಿ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಸೋಮವಾರ ಓರ್ವ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡುವ ಮೂಲಕ ಗಡಿ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

"ಒಬ್ಬ ಪಾಕಿಸ್ತಾನಿ ಉಗ್ರ ಅಥವಾ ನುಸುಳುಕೋರನನ್ನು ಕುಪ್ವಾರಾ ಜಿಲ್ಲೆಯ ಕೆರಾನ್ ಸೆಕ್ಟರ್(ಜುಮಾಗಿಂಡ್ ಪ್ರದೇಶ) ನಲ್ಲಿ ಸೇನೆ ಹೊಡೆದುರುಳಿಸಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com