ಅಕ್ರಮ ಹಣ ವರ್ಗಾವಣೆ ಪ್ರಕರಣ: ಪತ್ರಕರ್ತ ಸಿದ್ದಿಕಿ ಕಪ್ಪನ್‌ಗೆ ಜಾಮೀನು ನಿರಾಕರಿಸಿದೆ ಲಖನೌ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ನೀಡಲು ಲಖನೌ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ.
ಪತ್ರಕರ್ತ ಸಿದ್ದಿಕಿ ಕಪ್ಪನ್
ಪತ್ರಕರ್ತ ಸಿದ್ದಿಕಿ ಕಪ್ಪನ್

ಲಖನೌ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ನೀಡಲು ಲಖನೌ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ.

ಜಾಮೀನು ಕೋರಿ ಕಪ್ಪನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಸಂಜಯ್ ಶಂಕರ್ ಪಾಂಡೆ ಅವರು, ಅಕ್ಟೋಬರ್ 12 ರಂದು ಪತ್ರಕರ್ತನ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಜಾಮೀನು ಅರ್ಜಿ ವಜಾಗೊಳಿಸಿ ತೀರ್ಪು ನೀಡಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಪತ್ರಕರ್ತ ಕಪ್ಪನ್ ಅವರು ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದಿದ್ದರೂ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ.

2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹಾಥರಸ್‌ಗೆ ತೆರಳುತ್ತಿದ್ದಾಗ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕಿ ಕಪ್ಪನ್‌ ಅವರಿಗೆ ಕಳೆದ ಸೆಪ್ಟೆಂಬರ್ 9 ರಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com